Sunday, May 5, 2024
Homeಉದ್ಯಮಜುಲೈ 31 ರವರೆಗೆ ಅಂತರರಾಷ್ಟ್ರೀಯ ವಿಮಾನ ಸಂಚಾರ ಬಂದ್

ಜುಲೈ 31 ರವರೆಗೆ ಅಂತರರಾಷ್ಟ್ರೀಯ ವಿಮಾನ ಸಂಚಾರ ಬಂದ್

spot_img
- Advertisement -
- Advertisement -

ನವದೆಹಲಿ: ಕರೋನವೈರಸ್ ಸಾಂಕ್ರಾಮಿಕ ರೋಗವನ್ನು ನಿಭಾಯಿಸಲು ರಾಷ್ಟ್ರವು ತನ್ನ “ಅನ್ಲಾಕ್ 2” ಯೋಜನೆಯನ್ನು ರೂಪಿಸುತ್ತಿರುವುದರಿಂದ ಭಾರತವು ಜುಲೈ 31 ರವರೆಗೆ ಅಂತರರಾಷ್ಟ್ರೀಯ ವಿಮಾನಗಳ ನಿಷೇಧವನ್ನು ವಿಸ್ತರಿಸಿದೆ.

ಎಲ್ಲಾ ಅಂತಾರಾಷ್ಟ್ರೀಯ ವಿಮಾನಗಳ ನಿಷೇಧವನ್ನು ಜುಲೈ 31 ರವರೆಗೆ ವಿಸ್ತರಿಸಲಾಗಿದ್ದು, ಡಿಜಿಸಿಎ ಅನುಮೋದಿಸಿದ ಸರಕು ಮತ್ತು ವಿಮಾನಗಳನ್ನು ಮಾತ್ರ ಅನುಮತಿಸಲಾಗುವುದು ಎಂದು ನಾಗರಿಕ ವಿಮಾನಯಾನ ನಿಯಂತ್ರಕ ಡಿಜಿಸಿಎ ತಿಳಿಸಿದೆ.

ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ ಅಧ್ಯಕ್ಷ ಅರವಿಂದ ಸಿಂಗ್ ನೀಡಿರುವ ಮಾಹಿತಿಯಂತೆ ಸದ್ಯಕ್ಕೆ ಅಂತರರಾಷ್ಟ್ರೀಯ ವಿಮಾನಗಳ ಸಂಚಾರಕ್ಕೆ ನಿರ್ಬಂಧವಿದ್ದು, ಸಂಚಾರ ಆರಂಭಿಸುವ ಮೊದಲು ಯುರೋಪ್ ರಾಷ್ಟ್ರಗಳು, ಕೊಲ್ಲಿ ರಾಷ್ಟ್ರಗಳು, ಅಮೆರಿಕ ಮೊದಲಾದ ದೇಶಗಳೊಂದಿಗೆ ಸಮಾಲೋಚನೆ ನಡೆಸಲಾಗುವುದು. ಸಮಾಲೋಚನೆ ನಂತರವೇ ಅಂತರರಾಷ್ಟ್ರೀಯ ವಿಮಾನ ಸೇವೆಗೆ ಅವಕಾಶ ನೀಡಲಾಗುವುದು ಎಂದು ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!