Friday, June 5, 2026
Homeಕ್ರೀಡೆT-20 ಸರಣಿ: ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಆಂಗ್ಲರನ್ನು ಬಗ್ಗು ಬಡಿದ ಟೀಮ್ ಇಂಡಿಯಾ

T-20 ಸರಣಿ: ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಆಂಗ್ಲರನ್ನು ಬಗ್ಗು ಬಡಿದ ಟೀಮ್ ಇಂಡಿಯಾ

- Advertisement -
- Advertisement -

ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಭಾರತ-ಇಂಗ್ಲೆಂಡ್ ನಡುವಣ 5ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ 36 ರನ್ ನಿಂದ ಭರ್ಜರಿ ಜಯ ಸಾಧಿಸುವ ಮೂಲಕ 5 ಪಂದ್ಯಗಳ ಟಿ-20 ಸರಣಿಯನ್ನು 3-2 ಅಂತರದಿಂದ ತನ್ನದಾಗಿಸಿದೆ.

ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ, ನಾಯಕ ವಿರಾಟ್ ಕೊಹ್ಲಿ ಹಾಗೂ ಆರಂಭಿಕ ಬ್ಯಾಟ್ಸ್ ಮನ್ ರೋಹಿತ್ ಶರ್ಮಾ ಅವರ ಅರ್ಧಶತಕಗಳ ನೆರವಿನಿಂದ ಇಂಗ್ಲೆಂಡ್ ಗೆಲುವಿಗೆ 225 ರನ್ ಗುರಿ ನೀಡಿತ್ತು.

ಆದರೆ ಗುರಿ ಬೆನ್ನಟ್ಟಿದ ಆಂಗ್ಲರ ಪಡೆ 20 ಓವರ್ ನಲ್ಲಿ 8 ವಿಕೆಟ್ ನಷ್ಟಕ್ಕೆ ಕೇವಲ 188 ರನ್ ಗಳಿಸಲಷ್ಟೇ ಶಕ್ತವಾಯಿತು. ಭಾರತದ ಪರ ಬೌಲಿಂಗ್ ನಲ್ಲಿ ಶಾರ್ದೂಲ್ ಠಾಕೂರ್ 3 ವಿಕೆಟ್, ಭುವನೇಶ್ವರ್ ಕುಮಾರ್ 2 ವಿಕೆಟ್ ಮತ್ತು ಹಾರ್ದಿಕ್ ಪಾಂಡ್ಯ ಹಾಗೂ ನಟರಾಜನ್ ತಲಾ ಒಂದು ವಿಕೆಟ್ ಪಡೆಯುವ ಮೂಲಕ ಮಿಂಚಿದರು

- Advertisement -

Latest News

error: Content is protected !!