Sunday, June 7, 2026
Homeತಾಜಾ ಸುದ್ದಿರಾಮಮಂದಿರ :ಭಾರತದ ವಿಷಯದಲ್ಲಿ ಮೂಗು ತೂರಿಸದಂತೆ ಪಾಕಿಸ್ಥಾನಕ್ಕೆ ಎಚ್ಚರಿಕೆ

ರಾಮಮಂದಿರ :ಭಾರತದ ವಿಷಯದಲ್ಲಿ ಮೂಗು ತೂರಿಸದಂತೆ ಪಾಕಿಸ್ಥಾನಕ್ಕೆ ಎಚ್ಚರಿಕೆ

- Advertisement -
- Advertisement -

ನವದೆಹಲಿ: ಭಾರತದ ಅಯೋಧ್ಯೆಯಲ್ಲಿ ಭವ್ಯವಾದ ರಾಮಮಂದಿರ ನಿರ್ಮಾಣ ಕಾರ್ಯವನ್ನು ಟೀಕಿಸಿದ್ದ ಪಾಕಿಸ್ತಾನಕ್ಕೆ ಭಾರತವು ಕಟುವಾಗಿ ತಿರುಗೇಟು ನೀಡಿದೆ.
ರಾಮ ದೇಗುಲ ನಿರ್ಮಾಣದ ಕುರಿತು ಪಾಕಿಸ್ತಾನದ ಪತ್ರಿಕಾ ಹೇಳಿಕೆಗೆ ಸಂಬಂಧಿಸಿ ಮಾಧ್ಯಮ ಪ್ರಶ್ನೆಗಳಿಗೆ ಉತ್ತರಿಸಿದ ವಿದೇಶಾಂಗ ಸಚಿವಾಲಯದ ವಕ್ತಾರ ಅನುರಾಗ್ ಶ್ರೀವಾಸ್ತವ, ‘ಭಾರತದ ಆಂತರಿಕ ವಿಷಯದ ಬಗ್ಗೆ ಇಸ್ಲಾಮಿಕ್ ರಿಪಬ್ಲಿಕ್ ಆಫ್ ಪಾಕಿಸ್ತಾನದ ಪತ್ರಿಕಾ ಹೇಳಿಕೆಯನ್ನು ಗಮನಿಸಲಾಗಿದೆ. ಪಾಕಿಸ್ತಾನವು ಭಾರತದ ವ್ಯವಹಾರಗಳಲ್ಲಿ ಹಸ್ತಕ್ಷೇಪ ಮಾಡುವುದರಿಂದ ಹಾಗೂ ಕೋಮು ಪ್ರಚೋದನೆ ನೀಡುವ ಕೆಲಸದಿಂದ ದೂರವಿರಬೇಕು ಎಂದಿದ್ದಾರೆ.
‘ಗಡಿಯಾಚೆಗಿನ ಭಯೋತ್ಪಾದನೆಗೆ ಬೆಂಬಲ ನೀಡುತ್ತಿರುವ ಮತ್ತು ಅಲ್ಪಸಂಖ್ಯಾತರಿಗೆ ಧಾರ್ಮಿಕ ಹಕ್ಕುಗಳನ್ನು ನಿರಾಕರಿಸಿರುವ ಪಾಕಿಸ್ತಾನ ಇಂತಹ ಹೇಳಿಕೆ ನೀಡುವುದು ಅಚ್ಚರಿ ಮೂಡಿಸುವುದಿಲ್ಲ’ ಎಂದು ತಿಳಿಸಿದ್ದಾರೆ.
ರಾಮಮಂದಿರಕ್ಕೆ ಶಿಲಾನ್ಯಾಸ ನೆರವೇರಿಸಿದ್ದನ್ನು ಪಾಕಿಸ್ತಾನ ಬುಧವಾರ ಟೀಕಿಸಿತ್ತು.

- Advertisement -

Latest News

error: Content is protected !!