Wednesday, June 24, 2026
Homeಕ್ರೀಡೆಭಾರತ-ಇಂಗ್ಲೆಂಡ್ 3ನೇ ಟೆಸ್ಟ್‌ ಪಂದ್ಯ: 10 ವಿಕೆಟ್​ ಗಳಿಂದ ಗೆದ್ದು ಬೀಗಿದ ಟೀಂ ಇಂಡಿಯಾ, ಎರಡೇ...

ಭಾರತ-ಇಂಗ್ಲೆಂಡ್ 3ನೇ ಟೆಸ್ಟ್‌ ಪಂದ್ಯ: 10 ವಿಕೆಟ್​ ಗಳಿಂದ ಗೆದ್ದು ಬೀಗಿದ ಟೀಂ ಇಂಡಿಯಾ, ಎರಡೇ ದಿನದಲ್ಲಿ ಮುಗಿದ ಪಂದ್ಯ

- Advertisement -
- Advertisement -

ಅಹಮದಾಬಾದ್: ಜಗತ್ತಿನ ಅತೀ ದೊಡ್ಡ ಕ್ರಿಕೆಟ್ ಕ್ರೀಡಾಂಗಣ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾಗೆ 10 ವಿಕೆಟ್ ಗಳ ಭರ್ಜರಿ ಗೆಲುವು ಸಿಕ್ಕಿದೆ. ಪಿಂಕ್ ಬಾಲ್ ಪಂದ್ಯದಲ್ಲಿ ಯಾವುದೇ ವಿಕೆಟ್ ನಷ್ಟವಿಲ್ಲದೆ ಭಾರತ ಗುರಿ ಮುಟ್ಟಿದೆ.

ಪ್ರಥಮ ಇನ್ನಿಂಗ್ಸ್ ನಲ್ಲಿ ಇಂಗ್ಲೆಂಡ್ 112/10, ಭಾರತ 145/10
ಎರಡನೇ ಇನಿಂಗ್ಸ್ ನಲ್ಲಿ ಇಂಗ್ಲೆಂಡ್ 81 ಕ್ಕೆ ಆಲೌಟ್ ಆಗಿತ್ತು. ಭಾರತ 7.4 ಓವರ್ ಗಳಲ್ಲಿ ವಿಕೆಟ್ ನಷ್ಟವಿಲ್ಲದೇ 49 ರನ್ ಗಳಿಸಿದೆ. ರೂಟ್​ ಓವರ್​ನಲ್ಲಿ 2 ಬೌಂಡರಿ ಹಾಗೂ 1 ಭರ್ಜರಿ ಸಿಕ್ಸರ್​ನೊಂದಿಗೆ ರೋಹಿತ್​ ಶರ್ಮಾ ಭಾರತಕ್ಕೆ ಗೆಲುವು ತಂದುಕೊಟ್ಟರು. ರೋಹಿತ್ ಶರ್ಮಾ ಅಜೇಯ 25, ಶುಭಮನ್ ಗಿಲ್ ಅಜೇಯ 15 ರನ್ ಗಳಿಸಿದ್ದಾರೆ. ಎರಡೇ ದಿನದಲ್ಲಿ ಮೂರನೇ ಟೆಸ್ಟ್ ಪಂದ್ಯ ಮುಕ್ತಾಯವಾಗಿದೆ.

ಟೀಂ ಇಂಡಿಯಾ ಪರ ಬೌಲಿಂಗ್​ನಲ್ಲಿ ಮಿಂಚಿದ ಅಕ್ಷರ್​ ಪಟೇಲ್​ 2 ಇನ್ನಿಂಗ್ಸ್​ ಸೇರಿ 11 ವಿಕೆಟ್ ಪಡೆದರೆ, ಅಶ್ವಿನ್ 7 ವಿಕೆಟ್ ಪಡೆದು ಮಿಂಚಿದರು.

ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾ 2-1 ಅಂತರದಿಂದ ಮುನ್ನಡೆ ಸಾಧಿಸಿದೆ.

- Advertisement -

Latest News

error: Content is protected !!