Monday, April 29, 2024
Homeತಾಜಾ ಸುದ್ದಿಕಾಶ್ಮೀರದಲ್ಲಿ ಉಗ್ರ ನಿಗ್ರಹ ಕಾರ್ಯಾಚರಣೆ- ಮತ್ತೋರ್ವ ಉಗ್ರನನ್ನು ಹೊಡೆದುರುಳಿಸಿದ ಭಾರತೀಯ ಸೇನೆ

ಕಾಶ್ಮೀರದಲ್ಲಿ ಉಗ್ರ ನಿಗ್ರಹ ಕಾರ್ಯಾಚರಣೆ- ಮತ್ತೋರ್ವ ಉಗ್ರನನ್ನು ಹೊಡೆದುರುಳಿಸಿದ ಭಾರತೀಯ ಸೇನೆ

spot_img
- Advertisement -
- Advertisement -

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆಯಿಂದ ಉಗ್ರ ನಿಗ್ರಹ ಕಾರ್ಯಾಚರಣೆ ಮುಂದುವರೆದಿದ್ದು, ಓರ್ವ ಉಗ್ರನನ್ನು ಭಾನುವಾರ ಹೊಡೆದುರುಳಿಸಲಾಗಿದೆ.

ಕಾಶ್ಮೀರದ ಕುಪ್ವಾರದಲ್ಲಿಉಗ್ರನೊಬ್ಬ ಅವಿತಿರುವ ಕುರಿತು ಖಚಿತ ಮಾಹಿತಿ ಪಡೆದ ಭದ್ರತಾ ಪಡೆಗಳು ಆ ಪ್ರದೇಶವನ್ನು ಸುತ್ತುವರೆದು ಶೋಧ ನಡೆಸಿವೆ. ಈ ವೇಳೆ ಗುಂಡಿನ ಚಕಮಕಿ ನಡೆದಿದ್ದು, ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಉಗ್ರ ಹತನಾಗಿದ್ದಾನೆ.

ಘಟನಾ ಪ್ರದೇಶದಲ್ಲಿ ಸೇನಾ ಕಾರ್ಯಾಚರಣೆ ಮುಂದುವರೆದಿದೆ. ಸುತ್ತಮುತ್ತಲಿನ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ತೀವ್ರಗೊಳಿಸಲಾಗಿದೆ ಎಂದು ಸೇನಾಧಿಕಾರಿಗಳು ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!