Thursday, October 1, 2026
Homeತಾಜಾ ಸುದ್ದಿದುಬೈ-ಟೆಲ್ ಅವಿವ್ ವಿಮಾನದಲ್ಲಿ ಭೀಕರ ದಾಳಿ: 174 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್ ಕ್ಯಾಪ್ಟನ್...

ದುಬೈ-ಟೆಲ್ ಅವಿವ್ ವಿಮಾನದಲ್ಲಿ ಭೀಕರ ದಾಳಿ: 174 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಚಾರ್!

- Advertisement -
- Advertisement -

ದುಬೈನಿಂದ ಟೆಲ್ ಅವಿವ್‌ಗೆ ತೆರಳುತ್ತಿದ್ದ ‘ಫ್ಲೈದುಬೈ’ (FZ 1073) ವಿಮಾನದಲ್ಲಿ ಭೀಕರ ದುರಂತವೊಂದನ್ನು ಭಾರತೀಯ ಮೂಲದ ಮುಖ್ಯ ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ತಮ್ಮ ಅಸಾಮಾನ್ಯ ಧೈರ್ಯದಿಂದ ತಪ್ಪಿಸಿದ್ದಾರೆ.

ಸೆಪ್ಟೆಂಬರ್ 30ರಂದು ವಿಮಾನವು ಸುಮಾರು 34,000 ಅಡಿ ಎತ್ತರದಲ್ಲಿ ಹಾರಾಟ ನಡೆಸುತ್ತಿದ್ದಾಗ, ಒಮಾನ್ ಮೂಲದ ಸಹ-ಪೈಲಟ್ ಇದ್ದಕ್ಕಿದ್ದಂತೆ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಅವರ ಮೇಲೆ ಚಾಕುವಿನಿಂದ ದಾಳಿ ನಡೆಸಿ, ವಿಮಾನವನ್ನು ಪತನಗೊಳಿಸಲು ಯತ್ನಿಸಿದನು. ಪರಿಣಾಮವಾಗಿ ವಿಮಾನವು ಕೇವಲ 2 ನಿಮಿಷಗಳಲ್ಲಿ 17,400 ಅಡಿ ಕೆಳಗೆ ಕುಸಿಯಿತು.

ಕುತ್ತಿಗೆ ಹಾಗೂ ದೇಹಕ್ಕೆ ತೀವ್ರ ಗಾಯಗಳಾಗಿದ್ದರೂ ಎದೆಗುಂದದ ಕ್ಯಾಪ್ಟನ್ ಸ್ಮಿತ್, ದಾಳಿಕೋರನ ವಿರುದ್ಧ ಹೋರಾಡಿ ಕಾಕ್‌ಪಿಟ್ ಬಾಗಿಲನ್ನು ತೆರೆಯುವಲ್ಲಿ ಯಶಸ್ವಿಯಾದರು. ತಕ್ಷಣವೇ ಸಿಬ್ಬಂದಿ ಹಾಗೂ ಪ್ರಯಾಣಿಕರು ಒಳನುಗ್ಗಿ ದಾಳಿಕೋರನನ್ನು ಕಟ್ಟಿಹಾಕಿದರು. ಬಳಿಕ ವಿಮಾನವನ್ನು ಸೌದಿ ಅರೇಬಿಯಾದ ತಬುಕ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿಸಲಾಯಿತು. ಇದರಿಂದ 27 ಮಕ್ಕಳು ಸೇರಿದಂತೆ 174 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮುಂಬೈ ಮೂಲದ ಸ್ಮಿತ್ ಮಚ್ಚಾರ್ ಸಾಹಸವನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಕೊಂಡಾಡಿದ್ದು, ‘ರಿಯಲ್ ಹೀರೋ’ ಎಂದು ಬಣ್ಣಿಸಿದ್ದಾರೆ. ತೀವ್ರ ಗಾಯಗೊಂಡಿರುವ ಕ್ಯಾಪ್ಟನ್ ಸ್ಮಿತ್ ಪ್ರಸ್ತುತ ಸೌದಿ ಅರೇಬಿಯಾದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

- Advertisement -

Latest News

error: Content is protected !!