Sunday, May 5, 2024
Homeಕ್ರೀಡೆಕ್ರಿಕೆಟ್ ವೃತ್ತಿಜೀವನಕ್ಕೆ ವಿದಾಯ ಹೇಳಿದ ಇಂಡಿಯಾದ ಆಫ್ ಸ್ಪಿನ್ನರ್ ಖ್ಯಾತಿಯ ಹರ್ಭಜನ್ ಸಿಂಗ್ !

ಕ್ರಿಕೆಟ್ ವೃತ್ತಿಜೀವನಕ್ಕೆ ವಿದಾಯ ಹೇಳಿದ ಇಂಡಿಯಾದ ಆಫ್ ಸ್ಪಿನ್ನರ್ ಖ್ಯಾತಿಯ ಹರ್ಭಜನ್ ಸಿಂಗ್ !

spot_img
- Advertisement -
- Advertisement -

ಮುಂಬೈ: ಇಂದು ಎಲ್ಲಾ ಮಾದರಿ ಕ್ರಿಕೆಟ್ ಗೆ ಟೀಂ ಇಂಡಿಯಾದ ಆಫ್ ಸ್ಪಿನ್ನರ್ ಹರ್ಭಜನ್ ಸಿಂಗ್ ಅವರು ವಿದಾಯ ಘೋಷಣೆ ಮಾಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಇವರು, “ಎಲ್ಲಾ ಒಳ್ಳೆಯ ವಿಷಯಗಳು ಕೊನೆಗೊಳ್ಳುತ್ತದೆ. ಇಂದು ನಾನು ಜೀವನದಲ್ಲಿ ಎಲ್ಲವನ್ನೂ ನೀಡಿದ ಆಟಕ್ಕೆ ವಿದಾಯ ಹೇಳುತ್ತಿದ್ದೇನೆ, ಈ 23 ವರ್ಷಗಳ ಸುದೀರ್ಘ ಪ್ರಯಾಣವನ್ನು ಸುಂದರ ಮತ್ತು ಸ್ಮರಣೀಯವಾಗಿ ಮಾಡಿದ ಪ್ರತಿಯೊಬ್ಬರಿಗೂ ನಾನು ಧನ್ಯವಾದ ಹೇಳಲು ಬಯಸುತ್ತೇನೆ. ನನ್ನ ಹೃತ್ಪೂರ್ವಕ ಧನ್ಯವಾದಗಳು” ಎಂದಿದು ತಿಳಿಸಿದ್ದಾರೆ.

ಹರ್ಭಜನ್ ಸಿಂಗ್ ರೆಸ್ಟ್ ರೆಕಾರ್ಡ್‌
ಪಂದ್ಯ: 103
ಇನ್ನಿಂಗ್ಸ್‌: 190
ವಿಕೆಟ್: 417
ಬೆಸ್ಟ್: 8/84
ಎಕಾನಮಿ: 2.84
5 ವಿಕೆಟ್: 25
10 ವಿಕೆಟ್: 5

ಹರ್ಭಜನ್ ಸಿಂಗ್ ( 41 ) 1998ರ ಮಾರ್ಚ್ 25ರಂದು ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಇವರು ಪದಾರ್ಪಣೆ ಮಾಡಿದ್ದರು. 103 ಟೆಸ್ಟ್, ಒಟ್ಟು 236 ಏಕದಿನ ಪಂದ್ಯಗಳು ಮತ್ತು 28 ಅಂತಾರಾಷ್ಟ್ರೀಯ ಟಿ20 ಪಂದ್ಯಗಳನ್ನು ಆಡಿದ್ದಾರೆ.

ಟೀಂ ಇಂಡಿಯಾ ಪರ ಕೊನೆಯದಾಗಿ 2016ರಲ್ಲಿ ಆಡಿದ್ದ ಹರ್ಭಜನ್, ಹರ್ಭಜನ್ 103 ಟೆಸ್ಟ್ ಪಂದ್ಯಗಳಲ್ಲಿ 417 ವಿಕೆಟ್‌ಗಳನ್ನು ಕಬಳಿಸಿದ್ದಾರೆ ಮತ್ತು ಅತಿ ಹೆಚ್ಚು ಟೆಸ್ಟ್ ವಿಕೆಟ್‌ ಪಡೆದ ಭಾರತೀಯರಲ್ಲಿ ನಾಲ್ಕನೇ ಸ್ಥಾನದಲ್ಲಿದ್ದಾರೆ. 236 ಏಕದಿನ ಪಂದ್ಯದಿಂದ 269 ವಿಕೆಟ್ ಮತ್ತು 28 ಟಿ20 ಪಂದ್ಯಗಳಿಂದ 25 ವಿಕೆಟ್ ಪಡೆದಿದ್ದಾರೆ. ಐಪಿಎಲ್‍ನಲ್ಲೂ ಕೂಡ 13 ಸೀಸನ್‍ಗಳಲ್ಲಿ ವಿವಿಧ ತಂಡಗಳನ್ನು ಪ್ರತಿನಿಧಿಸಿರುವ ಹರ್ಭಜನ್, 163 ಪಂದ್ಯಗಳಿಂದ 150 ವಿಕೆಟ್ ಪಡೆದು ಸಾಧನೆ ಮಾಡಿದ್ದಾರೆ.

- Advertisement -
spot_img

Latest News

error: Content is protected !!