Wednesday, April 16, 2025
Homeಕ್ರೀಡೆಭಾರತದ ಅಗ್ರಮಾನ್ಯ ಬ್ಯಾಡ್ಮಿಂಟನ್‌ ತಾರೆ ಪಿ.ವಿ ಸಿಂಧು ಹಸೆಮಣೆಗೆ; ಡಿ. 22ರಂದು ಮದುವೆಗೆ ಡೇಟ್ ಫಿಕ್ಸ್

ಭಾರತದ ಅಗ್ರಮಾನ್ಯ ಬ್ಯಾಡ್ಮಿಂಟನ್‌ ತಾರೆ ಪಿ.ವಿ ಸಿಂಧು ಹಸೆಮಣೆಗೆ; ಡಿ. 22ರಂದು ಮದುವೆಗೆ ಡೇಟ್ ಫಿಕ್ಸ್

spot_img
- Advertisement -
- Advertisement -

ಭಾರತದ ಅಗ್ರಮಾನ್ಯ ಬ್ಯಾಡ್ಮಿಂಟನ್‌ ತಾರೆ, ಎರಡು ಬಾರಿ ಒಲಿಂಪಿಕ್ ಪದಕವನ್ನು ತನ್ನ ಮುಡಿಗೇರಿಸಿಕೊಂಡಿರುವ ವಿಜೇತೆ ಪಿ.ವಿ ಸಿಂಧು ಶೀಘ್ರದಲ್ಲೇ ಹಸೆಮಣೆ ಏರಲಿದ್ದಾರೆ.

ಸಿಂಧು ಹೈದರಾಬಾದ್ ಮೂಲದ ಪೋಸಿಡೆಕ್ಸ್ ಟೆಕ್ನಾಲಜೀಸ್ ಎಂಬ ಖಾಸಗಿ ಕಂಪೆನಿಯ ಕಾರ್ಯನಿರ್ವಾಹಕ ನಿರ್ದೇಶಕರಾಗಿರುವ ವೆಂಕಟ ದತ್ತ ಸಾಯಿ ಎಂಬವರನ್ನು ವರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ತಾರೆಯ ಮದುವೆ ಕುರಿತಂತೆ ತಂದೆ ಪಿವಿ ರಮಣ ಮಾಹಿತಿ ನೀಡಿದ್ದಾರೆ. ಡಿ.20 ರಿಂದ ಮದುವೆ ಶಾಸ್ತ್ರಗಳು ಶುರುವಾಗಲಿದ್ದು, ಸಿಂಧು ಡಿ.22 ರಂದು ಉದಯಪುರದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ. ಹೈದರಾಬಾದ್‌ನಲ್ಲಿ ಡಿ.24 ರಂದು ಆರತಕ್ಷತೆ ನಡೆಯಲಿದೆ ಎಂದು ತಿಳಿಸಿದ್ದಾರೆ. 

ಇನ್ನು ಬ್ಯಾಡ್ಮಿಂಟನ್ ತಾರೆ ಸಿಂಧು ಇಲ್ಲಿಯವರೆಗೆ ಒಂದು ಚಿನ್ನದ ಪದಕ ಸೇರಿದಂತೆ ಒಟ್ಟು ಐದು ವಿಶ್ವ ಚಾಂಪಿಯನ್‌ಶಿಪ್ ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.

- Advertisement -
spot_img

Latest News

error: Content is protected !!