Thursday, June 4, 2026
Homeಕರಾವಳಿಉಡುಪಿಉಡುಪಿ: ಕೋಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಬೂದು ನೀರು ನಿರ್ವಹಣೆ ಮಾಹಿತಿ ಕಾರ್ಯಕ್ರಮ

ಉಡುಪಿ: ಕೋಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಬೂದು ನೀರು ನಿರ್ವಹಣೆ ಮಾಹಿತಿ ಕಾರ್ಯಕ್ರಮ

- Advertisement -
- Advertisement -

ಉಡುಪಿ: ಕರಾವಳಿ ತೀರದ ಗ್ರಾಮ ಪಂಚಾಯತ್ ಗಳಲ್ಲಿ ಬೂದು ನೀರನ್ನು ಸಮರ್ಪಕವಾಗಿ ನಿರ್ವಹಿಸುವ ಉದ್ದೇಶದಿಂದ
ಇಂದು ಕೋಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಾಹಿತಿ ಕಾರ್ಯಕ್ರಮ ನಡೆಯಿತು.

ಕೋಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ಮಾಹಿತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಕೋಡಿ ಪಂಚಾಯತ್ ಅಧ್ಯಕ್ಷರು, ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಪಂಚಾಯತ್ ಸಿಬ್ಬಂದಿಗಳು, ಶಾಲಾ ಶಿಕ್ಷಕರು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಭಾಗವಹಿಸಿದ್ದರು.

ಉಡುಪಿ ಜಿಲ್ಲಾ ಎನ್ ಆರ್ ಡಿಎಂಎಸ್ ಸಂಯೋಜಕರು, ಡಿಪಿಎಂ, ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಯ ಐಇಸಿ ಸಮಾಲೋಚಕರು ಹಾಗೂ ಐಎಸ್ ಆರ್ ಎ ಸಿಬ್ಬಂದಿಗಳು ಉಪಸ್ಥಿತರಿದ್ದರು. ಸ್ವಚ್ಛ ಭಾರತ್ ಮಿಷನ್ ಅಡಿಯಲ್ಲಿ ಮಾಹಿತಿ ಕಾರ್ಯಕ್ರಮ ನಡೆಯಿತು.

- Advertisement -

Latest News

error: Content is protected !!