- Advertisement -
- Advertisement -
ಮಂಗಳೂರು: ಖ್ಯಾತ ಹಿನ್ನೆಲೆ ಗಾಯಕ ಜಸ್ಕರಣ್ ಸಿಂಗ್ ಇಂದು ಮಂಗಳೂರಿನಲ್ಲಿ ಕೊರಗಜ್ಜನ ಸನ್ನಿಧಿಗೆ ಭೇಟಿ ನೀಡಿದ್ದಾರೆ.ಕೊರಗಜ್ಜನ ಸನ್ನಿಧಿಯಲ್ಲಿ ಪ್ರಾರ್ಥನೆ ಸಲ್ಲಿಸಿದ ಜಸ್ಕರಣ್ ಸಿಂಗ್, ತಮ್ಮ ಮುಂದಿನ ಸಿನಿಮಾ ಪ್ರಾಜೆಕ್ಟ್ ಗಳ ಬಗ್ಗೆಯೂ ಮಾತನಾಡಿದ್ದಾರೆ.
ಇದೇ ವೇಳೆ ಜಸ್ಕರಣ್ ಸಿಂಗ್ ಅವರನ್ನು ಶಾಲು ಹೊದಿಸಿ ಗೌರವಿಸಲಾಯಿತು. ಗೌರವ ಸ್ವೀಕರಿಸಿದ ಬಳಿಕ ಜಸ್ಕರಣ್ ಸಿಂಗ್ ಅಭಿಮಾನಿಗಳೊಂದಿಗೆ ಫೋಟೋ ತೆಗೆಸಿಕೊಂಡರು.
ಇತ್ತೀಚೆಗೆ ಸ್ಯಾಂಡಲ್ ವುಡ್ ನಲ್ಲಿ ತೆರೆ ಕಂಡ ಗಣೇಶ್ ಅಭಿನಯದ ಕೃಷ್ಣಂ ಪ್ರಣಯ ಸಖಿ ಚಿತ್ರದ ದ್ವಾಪರ ಹಾಡನ್ನು ಜಸ್ಕರಣ್ ಸಿಂಗ್ ಹಾಡಿದ್ದಾರೆ.ಸಿನಿಮಾ ಸೂಪರ್ ಹಿಟ್ ಆಗಿತ್ತಲ್ಲದೇ ದ್ವಾಪರ ಹಾಡು ಕೂಡಾ ಸಿನಿ ಪ್ರೇಕ್ಷಕರನ್ನು ದೊಡ್ಡ ಮಟ್ಟದಲ್ಲಿ ಸೆಳೆದಿತ್ತು.
- Advertisement -