Wednesday, June 26, 2024
Homeಕರಾವಳಿಕುಕ್ಕೆ ಸುಬ್ರಹ್ಮಣ್ಯ ಸುತ್ತಮುತ್ತ ಮಿಂಚು ಪ್ರತಿಬಂಧಕ ಅಳವಡಿಕೆ; ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ

ಕುಕ್ಕೆ ಸುಬ್ರಹ್ಮಣ್ಯ ಸುತ್ತಮುತ್ತ ಮಿಂಚು ಪ್ರತಿಬಂಧಕ ಅಳವಡಿಕೆ; ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ

spot_img
- Advertisement -
- Advertisement -

ಮಂಗಳೂರು: ಸಿಡಿಲು ಗುಡುಗಿನಿಂದ ಸಾವು ಪ್ರಕರಣ ಹೆಚ್ಚಾಗಿ ಸಂಭವಿಸುವ ಕುಕ್ಕೆ ಸುಬ್ರಹ್ಮಣ್ಯ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಿಂಚು ಪ್ರತಿಬಂಧಕ ವ್ಯವಸ್ಥೆಯನ್ನು ಅಳವಡಿಸಲು ಜಿಲ್ಲಾಡಳಿತ ಕ್ರಮ ಕೈಗೊಳ್ಳಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಳೆಗಾಲದ ಸಂದರ್ಭದಲ್ಲಿ ಸಂಭವನೀಯ ಪ್ರಾಕೃತಿಕ ವಿಕೋಪದ ಸಿದ್ಧತೆ ಸೇರಿದಂತೆ ಕುರಿತಂತೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ಆರಂಭಿಕ ಹಂತದಲ್ಲಿ ಸುಳ್ಯ, ಬೆಳ್ತಂಗಡಿ, ಸುಬ್ರಹ್ಮಣ್ಯದ ಕೆಲವೆಡೆ ನಾಲ್ಕೈದು ಕಡೆಗಳಲ್ಲಿ ಈ ಪ್ರತಿಬಂಧಕಗಳನ್ನು ಅಳವಡಿಸುವ ಬಗ್ಗೆ ಚರ್ಚೆ ನಡೆಸಿದರು.

ಕಳೆದ ಸುಮಾರು 10 ವರ್ಷಗಳಲ್ಲಿ ಸುಬ್ರಹ್ಮಣ್ಯ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಿಂಚಿನಿಂದ ಸಾವು ಹಾಗೂ ಆಸ್ತಿಪಾಸ್ತಿ ನಷ್ಟವಾಗಿರುವ ಪ್ರಕರಣಗಳು ನಡೆಯುತ್ತಿದೆ. ಎತ್ತರದ ಪ್ರದೇಶವಾಗಿರುವ ಕಾರಣ ಮಿಂಚಿನಿಂದ ಹೆಚ್ಚಿನ ಅಪಾಯ ಈ ಭಾಗದಲ್ಲಿ ಸಂಭವಿಸುತ್ತಿರುವುದಾಗಿ ಅಂದಾಜಿಸಲಾಗಿದ್ದು, ಹಾಗಾಗಿ ಪ್ರಾಯೋಗಿಕವಾಗಿ ಈ ಪ್ರದೇಶಗಳಲ್ಲಿ ಮಿಂಚು ಪ್ರತಿಬಂಧಕ ಅಳವಡಿಸಲು ಕ್ರಮ ವಹಿಸಲಾಗುತ್ತಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಸಭೆಯ ಬಳಿಕ ತಿಳಿಸಿದ್ದಾರೆ.

ಇದೇ ವೇಳೆ, ಮಳೆಗಾಲದಲ್ಲಿ ಸಂಭವಿಸಬಹುದಾದ ವಿಪತ್ತುಗಳನ್ನು ಎದುರಿಸಲು ಜಿಲ್ಲೆಯ ಎಲ್ಲಾ ಇಲಾಖೆಗಳು ಈಗಿನಿಂದಲೇ ಸನ್ನದ್ಧರಾಗಿರುವಂತೆ ಸಭೆಯಲ್ಲಿ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರು ಸೂಚನೆ ನೀಡಿದರು.

- Advertisement -
spot_img

Latest News

error: Content is protected !!