- Advertisement -
![]()
- Advertisement -
ಮಣಿಪಾಲ: ಶುಕ್ರವಾರ ಸಂಜೆ ಕಾರು ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಮಂಚಿಕೆರೆಯ ನಿವಾಸಿ ಉಮೇಶ್ ಮಡಿವಾಳ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಿಗ್ಗೆ ಮೃತಪಟ್ಟಿದ್ದಾರೆ.
ಉಮೇಶ್ ಶುಕ್ರವಾರ ಸಂಜೆ ಬೈಕ್ ನಲ್ಲಿ ಮಣಿಪಾಲದ ಕಡೆಗೆ ಹೋಗುತ್ತಿದ್ದರು. ಈ ವೇಳೆ ರಾಂಗ್ ಸೈಡ್ ನಲ್ಲಿ ಬಂದ ಮಾರುತಿ ಸುಜುಕಿ ಸ್ವಿಫ್ಟ್ ಕಾರು ಢಿಕ್ಕಿ ಹೊಡೆದಿದೆ. ಇದರಿಂದ ಉಮೇಶ್ ಅವರು ಗಂಭೀರವಾಗಿ ಗಾಯಗೊಂಡಿದ್ದು, ಕೂಡಲೇ ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಅವರು ವಿಧಿವಶರಾಗಿದ್ದಾರೆ.
- Advertisement -


