Wednesday, June 3, 2026
Homeಕರಾವಳಿಉಡುಪಿಅಕ್ಟೋಬರ್ 16 ರಂದು ಬೆಂಗಳೂರಿನಲ್ಲಿ ಒಳನಾಡು ಮೀನು ಉತ್ಪಾದಕರ ಸಮಾವೇಶ; ಸುದ್ದಿಗೋಷ್ಠಿಯಲ್ಲಿ ಮೀನುಗಾರಿಕಾ ಸಚಿವ ಅಂಗಾರ...

ಅಕ್ಟೋಬರ್ 16 ರಂದು ಬೆಂಗಳೂರಿನಲ್ಲಿ ಒಳನಾಡು ಮೀನು ಉತ್ಪಾದಕರ ಸಮಾವೇಶ; ಸುದ್ದಿಗೋಷ್ಠಿಯಲ್ಲಿ ಮೀನುಗಾರಿಕಾ ಸಚಿವ ಅಂಗಾರ ಹೇಳಿಕೆ

- Advertisement -
- Advertisement -

ಬೆಂಗಳೂರು: ಅಕ್ಟೋಬರ್ 16 ರಂದು ವಿಶ್ವ ಆಹಾರ ದಿನ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಒಳನಾಡು ಮೀನು ಉತ್ಪಾದಕರ ಸಮಾವೇಶ ನಡೆಯಲಿದೆ. ವಿಧಾನಸೌಧದಲ್ಲಿ ಇಂದು ಮೀನುಗಾರಿಕಾ ಸಚಿವ ಎಸ್. ಅಂಗಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.

ಅರಮನೆ ಮೈದಾನದಲ್ಲಿ ಸಮಾವೇಶ ನಡೆಯಲಿದ್ದು, ಸಿಎಂ ಬಸವರಾಜ ಬೊಮ್ಮಾಯಿ ಅವರಿಂದ ಉದ್ಘಾಟನೆಗೊಳ್ಳಲಿದೆ. ಮುಖ್ಯ ಅತಿಥಿಯಾಗಿ ಕೇಂದ್ರ ಮೀನುಗಾರಿಕಾ ಇಲಾಖೆ ರಾಜ್ಯ ಸಚಿವ ಡಾ. ಎಲ್. ಮುರುಗನ್ ಭಾಗಿಯಾಗಲಿದ್ದಾರೆ.

ಮೀನುಗಾರಿಕಾ ಇಲಾಖೆ ಮತ್ತು ಫ್ರೀಡಂ ಆಪ್ ಸಹಯೋಗದಲ್ಲಿ ಸಮಾವೇಶ ನಡೆಯಲಿದ್ದು, ಹತ್ತು ಸಾವಿರ ಜನರು ಭಾಗವಹಿಸುವ ನಿರೀಕ್ಷೆ ಇದೆ. ಸಮಾವೇಶದಲ್ಲಿ ಮೀನಿಗೆ ಕೊಡುವ ವಿವಿಧ ಆಹಾರ, ಮೀನು ಕೃಷಿಯಲ್ಲಿರುವ ಬಯೋಫ್ಲಾಕ್, ಆರ್ ಎಎಸ್ ತಂತ್ರಜ್ಞಾನ, ಮೀನಿನ ಮೌಲ್ಯವರ್ಧನೆ ಮತ್ತು ಮಾರುಕಟ್ಟೆ ಸಂಪರ್ಕದ ಬಗ್ಗೆ ಕಾರ್ಯಾಗಾರ ಕೂಡಾ ನಡೆಯಲಿದೆ.

- Advertisement -

Latest News

error: Content is protected !!