Saturday, August 29, 2026
HomeUncategorizedಉಡುಪಿ: ವೇಗವಾಗಿ ಬಂದು ಸ್ಕೂಟಿಗೆ ಡಿಕ್ಕಿ ಹೊಡೆದ ಇನ್ನೋವಾ ಕಾರು; ರಸ್ತೆಗೆ ಎಸೆಯಲ್ಪಟ್ಟ ಸವಾರ

ಉಡುಪಿ: ವೇಗವಾಗಿ ಬಂದು ಸ್ಕೂಟಿಗೆ ಡಿಕ್ಕಿ ಹೊಡೆದ ಇನ್ನೋವಾ ಕಾರು; ರಸ್ತೆಗೆ ಎಸೆಯಲ್ಪಟ್ಟ ಸವಾರ

- Advertisement -
- Advertisement -

ಉಡುಪಿ: ಅತಿ ವೇಗವಾಗಿ ಚಲಿಸುತ್ತಿದ್ದ ಇನ್ನೋವಾ ಕಾರು ಸ್ಕೂಟಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದು ಸ್ಕೂಟಿ ಸವಾರ ರಸ್ತೆಗೆ ಎಸೆಯಲ್ಪಟ್ಟ ಘಟನೆ ಹಿರಿಯಡ್ಕದಲ್ಲಿ ನಡೆದಿದೆ.

ಉಡುಪಿ ತಾಲೂಕಿನ ಹಿರಿಯಡ್ಕ ಪೇಟೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಸ್ಕೂಟಿ ಸವಾರ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸ್ಕೂಟಿ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ಡಿಕ್ಕಿ ಹೊಡೆದ ರಭಸಕ್ಕೆ ಚಲಿಸುತ್ತಿದ್ದ ಆಟೋಗೆ ಕೂಡಾ ಬೈಕ್ ತಗಲಿದ್ದು, ಎದುರಿನಿಂದ ಬರುತ್ತಿದ್ದ ಮತ್ತೊಂದು ಬೈಕ್ ಕೂಡಾ ಪಲ್ಟಿಯಾಗಿ ಸವಾರ ರಸ್ತೆಗೆ ಬಿದ್ದಿದ್ದಾರೆ. ಹಿರಿಯಡ್ಕ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ.

- Advertisement -

Latest News

error: Content is protected !!