Saturday, July 5, 2025
Homeಕರಾವಳಿಧರ್ಮಸ್ಥಳ: ಪೊಲೀಸ್ ಠಾಣೆಯ ನೂತನ ಕಟ್ಟಡಕ್ಕೆ ಗೃಹ ಸಚಿವರಿಂದ ಶಿಲಾನ್ಯಾಸ; 2.30 ಕೋಟಿ ರೂ. ವೆಚ್ಚದಲ್ಲಿ...

ಧರ್ಮಸ್ಥಳ: ಪೊಲೀಸ್ ಠಾಣೆಯ ನೂತನ ಕಟ್ಟಡಕ್ಕೆ ಗೃಹ ಸಚಿವರಿಂದ ಶಿಲಾನ್ಯಾಸ; 2.30 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಠಾಣೆ!

spot_img
- Advertisement -
- Advertisement -

ಧರ್ಮಸ್ಥಳ: ಧರ್ಮಸ್ಥಳ ಪೊಲೀಸ್ ಠಾಣೆಯ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮವನ್ನು ಕರ್ನಾಟಕ ಸರಕಾರದ ಗೃಹ ಸಚಿವ ಅರಗ ಜ್ಞಾನೇಂದ್ರ ರವರು ಮಂಗಳವಾರದಂದು ನೆರವೇರಿಸಿದರು.

ಸುಮಾರು 2.30 ಕೋಟಿ ರೂ. ವೆಚ್ಚದಲ್ಲಿ ಈ ನೂತನ ಕಟ್ಟಡ ನಿರ್ಮಾಣಗೊಳ್ಳಲಿದೆ. ಕಾರ್ಯಕ್ರಮದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಗೌರವ ಉಪಸ್ಥಿತರಿದ್ದರು.

ಶಾಸಕ ಹರೀಶ್ ಪೂಂಜ, ಧರ್ಮಸ್ಥಳ ಗ್ರಾ.ಪಂ ಅಧ್ಯಕ್ಷೆ ಜಯಾ ಮೋನಪ್ಪ ಗೌಡ, ಭಾರತ್ ಪೊಲೀಸ್ ಸೇವಾ ಡಿ.ಜಿ ಮತ್ತು ಐಜಿಪಿ ಪ್ರವೀಣ್ ಸೂದ್, ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಸೌಲಭ್ಯ ಅಭಿವೃದ್ಧಿ ನಿಗಮದ ಮುಖ್ಯ ಅಭಿಯಂತರರಾದ ಎನ್.ಜಿ ಗೌಡಯ್ಯ, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕ ಸೋನವಣೆ ಋಷಿಕೇಶ್, ಭಗವಾನ್, ಬೆಳ್ತಂಗಡಿ ವೃತ್ತ ನಿರೀಕ್ಷಕ ಶಿವಕುಮಾರ್, ಧರ್ಮಸ್ಥಳ ಪೊಲೀಸ್ ಠಾಣಾ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!