Tuesday, November 24, 2026
Homeಕರಾವಳಿರಾಜ್ಯಾದ್ಯಂತ 112 ಮಿನರಲ್ ವಾಟರ್ ಫ್ಯಾಕ್ಟರಿಗಳ ತಪಾಸಣೆ; ಯು.ಟಿ. ಖಾದರ್

ರಾಜ್ಯಾದ್ಯಂತ 112 ಮಿನರಲ್ ವಾಟರ್ ಫ್ಯಾಕ್ಟರಿಗಳ ತಪಾಸಣೆ; ಯು.ಟಿ. ಖಾದರ್

- Advertisement -
- Advertisement -

ಮಂಗಳೂರು: ರಾಜ್ಯದ ಮಿನರಲ್ ವಾಟರ್ ಕಂಪನಿಗಳ ಗುಣಮಟ್ಟ ಹಾಗೂ ಕಾರ್ಯನಿರ್ವಹಣೆಯನ್ನು ಪರಿಶೀಲಿಸುವ ಉದ್ದೇಶದಿಂದ ಆರೋಗ್ಯ ಇಲಾಖೆ ವಿಶೇಷ ತಪಾಸಣಾ ಕಾರ್ಯಾಚರಣೆ ನಡೆಸುತ್ತಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.

ರಾಜ್ಯಾದ್ಯಂತ ಒಟ್ಟು 112 ನೀರಿನ ಫ್ಯಾಕ್ಟರಿಗಳನ್ನು ಪರಿಶೀಲಿಸಲಾಗಿದ್ದು, ಈ ಪೈಕಿ 60 ಫ್ಯಾಕ್ಟರಿಗಳಿಂದ ನೀರಿನ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಪರೀಕ್ಷಾ ವರದಿ ಲಭ್ಯವಾದ ಬಳಿಕ ನಿಯಮಾನುಸಾರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ದೆಹಲಿಯಲ್ಲಿ ಬಿಸ್ಲೆರಿ ಬ್ರ್ಯಾಂಡ್ ವಿರುದ್ಧ ದಾಳಿ ನಡೆದಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವರು, ಕರ್ನಾಟಕದಲ್ಲಿನ ಪರಿಸ್ಥಿತಿಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಳ್ಳುವುದಾಗಿ ಹೇಳಿದ್ದಾರೆ.

ಅಲ್ಲದೆ, ಹೊರರಾಜ್ಯಗಳಿಂದ ಕರ್ನಾಟಕಕ್ಕೆ ಪೂರೈಕೆಯಾಗುವ ಕುಡಿಯುವ ನೀರನ್ನೂ ರಾಜ್ಯದಲ್ಲೇ ಗುಣಮಟ್ಟದ ಪರೀಕ್ಷೆಗೆ ಒಳಪಡಿಸಲಾಗುವುದು. ಜನರ ಆರೋಗ್ಯದ ವಿಚಾರದಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ. ನೀರಿನ ಗುಣಮಟ್ಟದಲ್ಲಿ ಲೋಪ ಕಂಡುಬಂದರೆ ಸಂಬಂಧಪಟ್ಟ ಕಂಪನಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

- Advertisement -

Latest News

error: Content is protected !!