- Advertisement -
- Advertisement -
ಮೂಡುಬಿದಿರೆ: ರಾಜ್ಯದಲ್ಲಿನ ಪೊಲೀಸ್ ಇಲಾಖೆಯ ದಕ್ಷ ಸೇವೆಗಾಗಿ ನೀಡಲಾಗುವ ಮುಖ್ಯಮಂತ್ರಿ ಪದಕಕ್ಕೆ ಮೂಡುಬಿದಿರೆಯ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ. ಅವರು ಭಾಜನರಾಗಿದ್ದಾರೆ.
2023 ನೇ ಸಾಲಿನ ಮುಖ್ಯಮಂತ್ರಿ ಪದಕಕ್ಕೆ ರಾಜ್ಯದ ಸುಮಾರು 126 ಮಂದಿ ಪೊಲೀಸ್ ಅಧಿಕಾರಿಗಳು ಆಯ್ಕೆಯಾಗಿದ್ದು, ಇವರಲ್ಲಿ ಸಂದೇಶ್ ಪಿ.ಜಿ. ಕೂಡ ಒಬ್ಬರಾಗಿದ್ದಾರೆ. ಇವರು ದ.ಕ ಹಾಗೂ ಉಡುಪಿ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಸೇವೆ ಸಲ್ಲಿಸಿದ್ದು, ಕರ್ತವ್ಯದಲ್ಲಿ ನಿಷ್ಠಾವಂತ ಅಧಿಕಾರಿಯಾಗಿ ಇಲಾಖೆ ಹಾಗೂ ಸಾರ್ವಜನಿಕ ವಲಯದಲ್ಲಿ ಗಮನ ಸೆಳೆದಿರುತ್ತಾರೆ.
ಪ್ರಸ್ತುತ ಅವರು ತಮ್ಮ ಕರ್ತವ್ಯವನ್ನು ಮೂಡುಬಿದಿರೆಯಲ್ಲಿ ಇನ್ಸ್ಪೆಕ್ಟರ್ ಆಗಿ ನಿರ್ವಹಿಸುತ್ತಿದ್ದಾರೆ.
- Advertisement -