Wednesday, June 24, 2026
Homeಚಿಕ್ಕಮಗಳೂರುಕೌಟುಂಬಿಕ ಕಲಹದಿಂದ ಬೇಸತ್ತು ಸಬ್ ಇನ್ಸ್ಪೆಕ್ಟರ್ ಪತ್ನಿ ನೇಣಿಗೆ ಶರಣು

ಕೌಟುಂಬಿಕ ಕಲಹದಿಂದ ಬೇಸತ್ತು ಸಬ್ ಇನ್ಸ್ಪೆಕ್ಟರ್ ಪತ್ನಿ ನೇಣಿಗೆ ಶರಣು

- Advertisement -
- Advertisement -

ಚಿಕ್ಕಮಗಳೂರು: ಕೌಟುಂಬಿಕ ಕಲಹದಿಂದ ಬೇಸತ್ತು ಸಬ್ ಇನ್ಸ್ಪೆಕ್ಟರ್ ಪತ್ನಿ ನೇಣಿಗೆ ಶರಣಾಗಿರುವ ಘಟನೆ ಕಡೂರು ತಾಲೂಕಿನ ಬೀರೂರಿನಲ್ಲಿ ನಿನ್ನೆ ರಾತ್ರಿ ನಡೆದಿದೆ. ಬೀರೂರು ಠಾಣೆಯ ಠಾಣಾಧಿಕಾರಿ ತಿಪ್ಪೇಶ್ ರವರ ಪತ್ನಿ ಪದ್ಮ (34) ಮೃತ ಮಹಿಳೆ.

ಮಕ್ಕಳಿಗೆ ಬೇಸಿಗೆ ರಜೆ ಇರುವ ಊರಿಗೆ ಕಳಿಸುವಂತೆ ಪದ್ಮ ಪತಿ  ತಿಪ್ಪೇಶ್ ಅವರ ಕೇಳಿದ್ದರು. ಆಗ ಊರಿಗೆ ಕಳಿಸುವ ವಿಚಾರದಲ್ಲಿ ಗಂಡ ಹೆಂಡತಿಯ ನಡುವೆ ಕಿರಿಕ್ ಆಗಿದೆ. ಇದೇ ಕಾರಣಕ್ಕೆ ಪದ್ಮ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಪದ್ಮ ಹಾಗೂ ತಿಪ್ಪೇಶ್ ಪ್ರೀತಿಸಿ ಮದುವೆ ಆಗಿದ್ದರು. ಇಬ್ಬರು ಮಕ್ಕಳಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದು ತನಿಖೆ ಮುಂದುವರೆಸಿದ್ದಾರೆ.

- Advertisement -

Latest News

error: Content is protected !!