Friday, May 17, 2024
Homeಕರಾವಳಿಉಡುಪಿಡೇರೆಯಲ್ಲಿ ಬೆಳೆದು ಬಿಎಸ್ಸಿ ಮೆಡಿಕಲ್ ಪದವಿ ಪಡೆದಾಕೆಯೀಗ ಗ್ರಾ.ಪಂ ಸದಸ್ಯೆ

ಡೇರೆಯಲ್ಲಿ ಬೆಳೆದು ಬಿಎಸ್ಸಿ ಮೆಡಿಕಲ್ ಪದವಿ ಪಡೆದಾಕೆಯೀಗ ಗ್ರಾ.ಪಂ ಸದಸ್ಯೆ

spot_img
- Advertisement -
- Advertisement -

ಮಂಗಳೂರು ಕಷ್ಟ ಅನ್ನೋದು ಮನುಷ್ಯ ಅಂದ್ಮೇಲೆ ಎಲ್ಲರಿಗೂ ಬರುತ್ತೆ. ಕೆಲವರು ಅದೇ ಕಷ್ಟವನ್ನು ಸವಾಲಾಗಿಸಿಗೊಂಡು ಬದುಕಿನಲ್ಲಿ ಉನ್ನತ ಸ್ಥಾನಕ್ಕೇರುತ್ತಾರೆ. ಇವತ್ತು ನಾವು ಹೇಳ ಹೊರಟಿರುವ ಯುವತಿಯದ್ದು ಅದೇ ಕಥೆ.

ಹೌದು… ನಾವು ಹೇಳ್ತಿರೋ ಯುವತಿಯ ಹೆಸರು ಮಮತಾ. ಸದ್ಯ ಪಾವೂರು ಗ್ರಾ.ಪಂಚಾಯತ್ ನ ನೂತನ ಸದಸ್ಯೆ. ಉಡುಪಿ ಮೂಲದವರಾದ ಇವರ ತಂದೆ ಕೃಷ್ಣಪ್ಪ, ತಾಯಿ ಪ್ರೇಮ ವಲಸೆ ಕಾರ್ಮಿಕರಾಗಿ ಊರೂರು ಸುತ್ತಿ ಬೀದಿ ಬದಿ ಡೇರೆ ಹಾಕಿ ಜೀವನ ನಡೆಸುತ್ತಿದ್ದರು. 1995ರಲ್ಲಿ ಮಮತಾ ತಂದೆ ಇದ್ದಕ್ಕಿದ್ದಂತೆ ಕಾಣೆಯಾಗಿದ್ದರು.  ಅಲ್ಲಿಂದ ನಂತರ ಮಮತಾ ತಾಯಿ ಪ್ರೇಮ ಹಾಗೂ ಅವರ ಮೂವರು ಮಕ್ಕಳಾದ ಶಿವ, ಬೋಜ, ಮಮತ ಪಜಿರು ಹಾಗೂ ಪಾವೂರು, ಇನೋಳಿಯ ರಸ್ತೆ ಬದಿ, ಶೌಚಕೊಠಡಿ, ದನದಹಟ್ಟಿಯಲ್ಲಿ ವಾಸವಾಗಿದ್ದರು. ಶಿವ ಕ್ಯಾನ್ಸರ್ ಕಾಯಿಲೆ ತುತ್ತಾಗಿ ಅನಾರೋಗ್ಯದಿಂದಿದ್ದರೆ, ಬೋಜ ಹಾಗೂ ಮಮತ ಅವರನ್ನು ಸ್ಥಳೀಯ ಶಿಕ್ಷಕ ಮಧು ಮೇಷ್ಟ್ರ ತನ್ನದೇ ಮುತುವರ್ಜಿಯಲ್ಲಿ ಮಲಾರ್‌ಪದವು ಶಾಲೆಗೆ ಸೇರಿಸಿದ್ದರು.

ಇನ್ನು ಮಮತಾ ತಾಯಿ ಪ್ರೇಮ ಸ್ಥಳೀಯ ಕೋರೆ, ಮನೆ ಮನೆ ತೆರಳಿ ಕಾರ್ಮಿಕರಾಗಿ ದುಡಿದು ಮಕ್ಕಳಿಗೆ ವಿದ್ಯಾಭ್ಯಾಸ ಕೊಡಿಸುತ್ತಿದ್ದರು. 2006ರಿಂದ ಮಮತ ಅವರು ಮಚ್ಚಿನ ಮೊರಾರ್ಜಿ ದೇಸಾಯಿ ವಿದ್ಯಾಸಂಸ್ಥೆಯಲ್ಲಿ ಪ್ರೌಢ ಶಿಕ್ಷಣ, ದೇರಳಕಟ್ಟೆ ಮೊರಾರ್ಜಿ ದೇಸಾಯಿಯಲ್ಲಿ ವಿಜ್ಞಾನ ವಿಭಾಗದಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಪಿಯುಸಿ ಪಾಸಾಗಿದ್ದರು. ನಂತರ ಮಂಗಳೂರಿನ ಕೊಲಾಸೋ ವಿದ್ಯಾಸಂಸ್ಥೆಯಲ್ಲಿ ಲ್ಯಾಬ್ ಟೆಕ್ಟಿಷಿನ್ ಡಿಪ್ಲಮಾ ಪದವಿ ಪೂರೈಸಿದ್ದರು.

 ಉನ್ನತ ಶಿಕ್ಷಣ ಪಡೆಯಬೇಕೆಂಬ ಆಸೆಯಿಂದ ಸ್ಥಳೀಯ ಪತ್ರಕರ್ತರ ಹಾಗೂ ದಾನಿಗಳ ಸಹಕಾರದಿಂದ ಬೆಂಗಳೂರಿಗೆ ಆಗಮಿಸಿದ ಮಮತ 4 ವರ್ಷಗಳ ಕಾಲ ಬೆಂಗಳೂರು ನಗರದಲ್ಲಿರುವ ಬೆಂಗಳೂರು ಸರ್ಕಾರಿ ಮೆಡಿಕಲ್ ಕಾಲೇಜಿನಲ್ಲಿ ಉನ್ನತ ಶಿಕ್ಷಣ ಪಡೆದು, 2020ರಲ್ಲಿ ಮೆಡಿಕಲ್ ವಿಭಾಗದಲ್ಲಿ ಬಿಎಸ್ಸಿ ಪದವಿಧರೆಯಾಗಿ ಅತ್ಯುನ್ನತ ಶ್ರೇಣಿಯಲ್ಲಿ ಪಾಸಾಗಿದ್ದರು. ಲಕ್ಷಾಂತರ ರೂಪಾಯಿ ವೆಚ್ಚಮಾಡಿ ಶಿಕ್ಷಣ ಪಡೆಯುವ ಸಾವಿರಾರು ವಿದ್ಯಾರ್ಥಿಗಳ ಮಧ್ಯೆ ಬೆಂಗಳೂರಿನ ಆನೆಪಾಳ್ಯ ಎಂಬ ಕೊಳೆಗೇರಿ ಪ್ರದೇಶದಲ್ಲೇ ವಾಸಿಸುತ್ತಲೇ ಮಮತಾ ಅವರು ಮೆಡಿಕಲ್ ಬಿಎಸ್ಸಿ ಪದವಿಧರೆಯಾಗಿದ್ದಾರೆ ಎಂಬುದೇ ವಿಶೇಷ.

ಇನ್ನು ಈ ಬಾರಿಯ ಗ್ರಾ.ಪಂಚಾಯತ್ ಚುನಾವಣೆಯಲ್ಲಿ ಮಮತಾ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಇದೀಗ ಅವರು ಗೆಲುವು ಸಾಧಿಸಿದ್ದಾರೆ. ಕಳೆದ 3-4 ಚುನಾವಣೆಯಲ್ಲಿ ಇಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯಾರ್ಥಿಗಳೇ ಜಯ ಗಳಿಸುತ್ತಿದ್ದು, ಇದೇ ಮೊದಲಬಾರಿ ಬಿಜೆಪಿ ಬೆಂಬಲಿತ ಮಮತಾ ಅವರನ್ನು ತಮ್ಮ ಪ್ರತಿನಿಧಿಯಾಗಿ ಗ್ರಾಪಂಗೆ ಪಾವೂರಿನ ಜನತೆ ಬಹುಮತ ನೀಡಿದ್ದಾರೆ.

- Advertisement -
spot_img

Latest News

error: Content is protected !!