Tuesday, May 7, 2024
Homeಕರಾವಳಿಒಂದು ತಿಂಗಳೊಳಗೆ ಬಸ್​ಗಳಿಗೆ ಬಾಗಿಲನ್ನು ಅಳವಡಿಸಿ ಅಫಿದಾವಿತ್ ಸಲ್ಲಿಸಿ; ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಕಟ್ಟುನಿಟ್ಟಿನ ಸೂಚನೆ

ಒಂದು ತಿಂಗಳೊಳಗೆ ಬಸ್​ಗಳಿಗೆ ಬಾಗಿಲನ್ನು ಅಳವಡಿಸಿ ಅಫಿದಾವಿತ್ ಸಲ್ಲಿಸಿ; ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಕಟ್ಟುನಿಟ್ಟಿನ ಸೂಚನೆ

spot_img
- Advertisement -
- Advertisement -

ಮಂಗಳೂರು: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ’2017 ರಿಂದ ನೋಂದಣಿಯಾಗಿರುವ ಎಲ್ಲಾ ಸಾರ್ವಜನಿಕ ಬಸ್‌ಗಳು ಮುಂದಿನ ಒಂದು ತಿಂಗಳೊಳಗೆ ಬಾಗಿಲನ್ನು ಅಳವಡಿಸಿ ಅಫಿದಾವಿತ್ ಸಲ್ಲಿಸಬೇಕು’ ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಅವರು ಬುಧವಾರದಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ‘2017ರಿಂದ ನೋಂದಣಿಯಾಗುವ ಎಲ್ಲಾ ಬಸ್ಸುಗಳು ಕಡ್ಡಾಯವಾಗಿ ಬಾಗಿಲನ್ನು ಹೊಂದಿರಬೇಕು. ಇಂತಹ ಸೂಚನೆ ಕಾನೂನಿನಲ್ಲಿಯೇ ಇದೆ. ಈ ಹಿನ್ನೆಲೆಯಲ್ಲಿ ಎಲ್ಲಾ ಬಸ್ಸುಗಳು ಇದನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಮುಂದಿನ ಒಂದು ತಿಂಗಳೊಳಗೆ ಇದನ್ನು ಕಟ್ಟುನಿಟ್ಟಾಗಿ ಜಾರಿಗೆ ತಂದು ಬಸ್ಸು ಮಾಲೀಕರು ಅಫಿದಾವಿತ್ ಸಲ್ಲಿಸಬೇಕು ಎಂದು ಅವರು ಆರ್‌ಟಿಓಗೆ’ ನಿರ್ದೇಶಿಸಿದರು.

ಬಸ್‌ಗಳಲ್ಲಿ ಬಾಗಿಲನ್ನು ಅಳವಡಿಸಬೇಕೆಂದು ಸಾರ್ವಜನಿಕರಿಂದಲೂ ತೀವ್ರ ಒತ್ತಡ ಬರುತ್ತಿವೆ. ಜನಸಂಪರ್ಕ ಸಭೆಗಳಲ್ಲಿಯೂ ಮನವಿಗಳು ಬಂದಿವೆ. ಕೇರಳ, ತಮಿಳುನಾಡು, ಆಂಧ್ರ ಪ್ರದೇಶ ಮತ್ತಿತರ ರಾಜ್ಯಗಳಲ್ಲೂ ಬಸ್‌ಗಳಲ್ಲಿ ಬಾಗಿಲು ಅಳವಡಿಸಿ ಸಂಚರಿಸುತ್ತಿವೆ. ಬೆಂಗಳೂರಿನಲ್ಲಿಯೂ ಸಿಟಿ ಬಸ್‌ಗಳಲ್ಲಿ ಬಾಗಿಲು ಇರುವುದರಿಂದ ಸಾರ್ವಜನಿಕರ ಸಂಚಾರ ನಿರಾತಂಕವಾಗಿದೆ. ಇದರಿಂದ ಸಂಚಾರ ವ್ಯವಸ್ಥೆಯೂ ಸುಗಮವಾಗಿದೆ. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿಯೂ ಜಾರಿಗೆ ತರಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

- Advertisement -
spot_img

Latest News

error: Content is protected !!