Tuesday, May 21, 2024
Homeತಾಜಾ ಸುದ್ದಿಶಿವಮೊಗ್ಗದಲ್ಲಿ ಕಾಂತಾರ ಸಿನಿಮಾಗೆ ಅವಮಾನ ಎಸಗಿದ ಕಿಡಿಗೇಡಿಗಳು

ಶಿವಮೊಗ್ಗದಲ್ಲಿ ಕಾಂತಾರ ಸಿನಿಮಾಗೆ ಅವಮಾನ ಎಸಗಿದ ಕಿಡಿಗೇಡಿಗಳು

spot_img
- Advertisement -
- Advertisement -

ಶಿವಮೊಗ್ಗ; ರಾಜ್ಯದಾದ್ಯಂತ ಕಾಂತಾರ ಸಿನಿಮಾ ಭರ್ಜರಿ ಪ್ರದರ್ಶನ ಕಾಣುತ್ತಿದ್ದು ಹಿಂದಿಯಲ್ಲೂ ಸಿನಿಮಾ ಬಿಡುಗಡೆ ಸಿದ್ಧತೆ ಜೋರಾಗಿಯೇ ನಡೆಯುತ್ತಿದೆ. ಹೀಗಿರುವಾಗಲೇ ಶಿವಮೊಗ್ಗದಲ್ಲಿ ಸಿನಿಮಾಗೆ ಅವಮಾನ ಎಸಗಲಾಗಿದೆ.

ಕಾಂತಾರ ಸಿನಿಮಾ ಪೋಸ್ಟರ್ ನೋಡಿ ಕೆಲ ವಿಕೃತ ಮನಸ್ಸಿನವರು ಪೋಸ್ಟರ್ ಮೇಲೆ ವಿಕೃತ ಬರಹವನ್ನೇ ಬರೆದಿದ್ದಾರೆ. ದೇವರಿಗೆ ಅವಹೇಳನ ಮಾಡುವಂತಹ ಪದ ಬಳಕೆ ಮಾಡಿದ್ದಾರೆ. ಈ ಬರಹವುಳ್ಳ ಪೋಸ್ಟರ್ ನೋಡಿದ ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಶಿವಮೊಗ್ಗದ ಮಹಾವೀರ ವೃತ್ತದಲ್ಲಿ ಈ ಘಟನೆ ನಡೆದಿದ್ದು, ಕಾಂತಾರ ಸಿನಿಮಾ ಪೋಸ್ಟರ್ ಮೇಲೆ ‘F * * K YOU G * D’ ಅಂತಾ ಕಿಡಿಗೇಡಿಗಳು ಬರೆದಿದ್ದು, ಪೋಸ್ಟರ್ ಮೇಲೆ ಪೆನ್ನಿನಿಂದ ಈ ಬರಹವನ್ನು ಬರೆಯಲಾಗಿದೆ. ಸ್ಥಳಕ್ಕೆ ಜಯನಗರ ಠಾಣೆ ಪೊಲೀಸರು ಭೇಟಿ ಪರಿಶೀಲನೆ ಮಾಡಿದ್ದು, ತಕ್ಷಣವೇ ಅವಹೇಳನಕಾರಿ ಬರಹ ತೆಗೆಸಿದ್ದಾರೆ.

- Advertisement -
spot_img

Latest News

error: Content is protected !!