Saturday, June 6, 2026
Homeಕರಾವಳಿತುಳು ಭಾಷೆಯ ಬಗ್ಗೆ ತುಚ್ಛವಾಗಿ ಮಾತನಾಡಿದ ಆರೋಪ: ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಿನ್ಸಿಪಾಲ್...

ತುಳು ಭಾಷೆಯ ಬಗ್ಗೆ ತುಚ್ಛವಾಗಿ ಮಾತನಾಡಿದ ಆರೋಪ: ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಿನ್ಸಿಪಾಲ್ ವಿರುದ್ಧ ಪ್ರತಿಭಟನೆ

- Advertisement -
- Advertisement -

ಉಪ್ಪಿನಂಗಡಿ: ತುಳು ಭಾಷೆಯ ಬಗ್ಗೆ ತುಚ್ಛವಾಗಿ ಮಾತನಾಡಿದ್ದಾರೆಂದು ಆರೋಪಿಸಿ ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಿನ್ಸಿಪಾಲ್ ಶೇಖರ ಎಂ.ಬಿ. ಅವರ ವಿರುದ್ಧ  ವಿದ್ಯಾರ್ಥಿಗಳು ಕಾಲೇಜಿನಲ್ಲಿ ಪ್ರತಿಭಟನೆ ನಡೆಸಿದ ಘಟನೆ ಇಂದು ನಡೆದಿದೆ.

ಕಳೆದ ಆ.5 ಮತ್ತು ಆ.8ರಂದು ಉಪ್ಪಿನಂಗಡಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗ ವತಿಯಿಂದ ಕಾಲೇಜಿನಲ್ಲಿ ‘ತುಳುನಾಡ ಐಸಿರಿ’ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವೇಳೆ ಕಾಲೇಜಿನ ಪ್ರಿನ್ಸಿಪಾಲ್ ಶೇಖರ್ ಎಂ.ಬಿ. ಅವರು ತುಳು ಭಾಷೆಯ ಬಗ್ಗೆ ತುಚ್ಛವಾಗಿ ಮಾತನಾಡಿದ್ದಾರೆನ್ನಲಾಗಿದೆ. ಈ ಬಗ್ಗೆ ಆಕ್ರೋಶಗೊಂಡ ವಿದ್ಯಾರ್ಥಿಗಳು ಕಾಲೇಜಿನ ವರಾಂಡದಲ್ಲಿ ಜಮಾಯಿಸಿ ಇಂದು ಪ್ರತಿಭಟನೆ ನಡೆಸಿದರು.

- Advertisement -

Latest News

error: Content is protected !!