Wednesday, June 24, 2026
Homeತಾಜಾ ಸುದ್ದಿಕಾಲ್ತುಳಿತ ಪ್ರಕರಣದ ಹಿನ್ನೆಲೆಯಲ್ಲಿ ರಾಜ್ಯ ಗುಪ್ತಚರ ಇಲಾಖೆ ಎಡಿಜಿಪಿ ಸ್ಥಾನದಿಂದ ಹೇಮಂತ್ ನಿಂಬಾಳ್ಕರ್ ವರ್ಗಾವಣೆ

ಕಾಲ್ತುಳಿತ ಪ್ರಕರಣದ ಹಿನ್ನೆಲೆಯಲ್ಲಿ ರಾಜ್ಯ ಗುಪ್ತಚರ ಇಲಾಖೆ ಎಡಿಜಿಪಿ ಸ್ಥಾನದಿಂದ ಹೇಮಂತ್ ನಿಂಬಾಳ್ಕರ್ ವರ್ಗಾವಣೆ

- Advertisement -
- Advertisement -

ಬೆಂಗಳೂರು: ರಾಜ್ಯ ಗುಪ್ತಚರ ಇಲಾಖೆ ಎಡಿಜಿಪಿಯಾಗಿದ್ದ ಹೇಮಂತ್ ನಿಂಬಾಳ್ಕರ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದಿದ್ದ ಕಾಲ್ತುಳಿತ ಪ್ರಕರಣದಲ್ಲಿ ಗುಪ್ತಚರ ಇಲಾಖೆಯ ವೈಫಲ್ಯದ ಬಗ್ಗೆ ಭಾರೀ ಆರೋಪ ವ್ಯಕ್ತವಾಗಿತ್ತು. ಹೀಗಾಗಿ ಒತ್ತಡಕ್ಕೆ ಮಣಿದಿರುವ ರಾಜ್ಯ ಸರ್ಕಾರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗೆ ನಿಂಬಾಳ್ಕರ್ ಅವರನ್ನು ವರ್ಗಾಯಿಸಿದೆ. ಇದುವರೆಗೂ ಗುಪ್ತಚರ ಇಲಾಖೆ ಎಡಿಜಿಪಿಯಾಗಿದ್ದ ನಿಂಬಾಳ್ಕರ್ ವಾರ್ತಾ ಇಲಾಖೆ ಆಯುಕ್ತರಾಗಿ ಹೆಚ್ಚುವರಿ ಜವಾಬ್ದಾರಿ ನಿರ್ವಹಿಸುತ್ತಿದ್ದರು.

ಇನ್ನು ಗುಪ್ತಚರ ಇಲಾಖೆ ಎಡಿಜಿಪಿಯಾಗಿ ಗೃಹ ಇಲಾಖೆಯಲ್ಲಿ ಸರ್ಕಾರದ ಪ್ರಧಾನ ಕಾರ್ಯದರ್ಶಿ ಹುದ್ದೆಯಲ್ಲಿದ್ದ ರವಿ ಎಸ್. ಅವರನ್ನು ನೇಮಿಸಲಾಗಿದೆ.ಐಪಿಎಸ್ ಅಧಿಕಾರಿ ದಯಾನಂದ್ ಅಮಾನತು ಬೆನ್ನಲ್ಲೇ ಹೇಮಂತ್ ನಿಂಬಾಳ್ಕರ್ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೇ ಇರುವ ಬಗ್ಗೆ ವಿಪಕ್ಷಗಳು ರಾಜ್ಯ ಸರ್ಕಾರವನ್ನು ಪ್ರಶ್ನಿಸಿದ್ದವು.

- Advertisement -

Latest News

error: Content is protected !!