Tuesday, June 9, 2026
Homeಕರಾವಳಿಉಡುಪಿಅಂತರ್ ಜಿಲ್ಲಾ ಮನೆ ಕಳ್ಳತನ ಪ್ರಕರಣ; ಆರೋಪಿಯನ್ನು ಬಂಧಿಸಿದ ಪೊಲೀಸರು

ಅಂತರ್ ಜಿಲ್ಲಾ ಮನೆ ಕಳ್ಳತನ ಪ್ರಕರಣ; ಆರೋಪಿಯನ್ನು ಬಂಧಿಸಿದ ಪೊಲೀಸರು

- Advertisement -
- Advertisement -

ಉಡುಪಿ: ಕಾಪು ಮಲ್ಲಾರಿನಲ್ಲಿ ಅಂತರ್ ಜಿಲ್ಲಾ ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ ಘಟನೆ ನಡೆದಿದೆ.

ಮಲ್ಲಾರು ಗ್ರಾಮದ ತೌಸೀಫ್ ಅಹಮದ್(34) ಬಂಧಿತ ಆರೋಪಿ.

ಕಳ್ಳನು ಬಡಗುಬೆಟ್ಟು ಗ್ರಾಮದ ಶ್ರೀಮತಿ ಎಂಬವರ ಮನೆಗೆ ನುಗ್ಗಿದ್ದು ಒಟ್ಟು 188 ಗ್ರಾಂ ತೂಕದ ಚಿನ್ನಾಭರಣ ಹಾಗೂ 15,500ರೂ. ನಗದು ಕಳವು ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಉಡುಪಿ ನಗರ ಠಾಣಾ ಪೊಲೀಸ್ ನಿರೀಕ್ಷಕ ಮಂಜಪ್ಪಡಿ.ಆರ್, ಎಸ್ಸೆಗಳಾದ ಈರಣ್ಣ ಶಿರಗುಂಪಿ, ಭರತೇಶ್ ಕಂಕಣವಾಡಿ, ಪುನೀತ್ ಕುಮಾರ್ ಮತ್ತು ಸಿಬ್ಬಂದಿ ಸತೀಶ್ ಬೆಳ್ಳೆ, ಚೇತನ್, ಆನಂದ, ಎಸ್.ಶಿವಕುಮಾರ್, ರಿಯಾಝ್ ಅಹಮದ್‌, ವಿಶ್ವನಾಥ ಶೆಟ್ಟಿ, ಕಿರಣ್, ಹೇಮಂತ್ ಕುಮಾರ್, ಓಬಳೇಶ್, ರಾಜೇಂದ್ರರವರನ್ನೊಳಗೊಂಡ ತಂಡವು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿ ಈತನಿಂದ ಕಳವು ಮಾಡಿದ್ದ ಒಟ್ಟು 9,00,500ರೂ. ಮೌಲ್ಯದ 155 ಗ್ರಾಂ ತೂಕದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ.

ಈತನ ವಿರುದ್ಧ ಈಗಾಗಲೇ ಬಂಟ್ವಾಳ, ಪಣಂಬೂರು, ಬಜಪೆ ಕಡೆಗಳಲ್ಲಿ ಹಗಲು ಮನೆಗಳ್ಳತನ ಪ್ರಕರಣಗಳು ದಾಖಲಾಗಿವೆ.

- Advertisement -

Latest News

error: Content is protected !!