ಪುತ್ತೂರು : ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಸರ್ವೆ ಗ್ರಾಮದ ಭಕ್ತಕೋಡಿ ಎಂಬಲ್ಲಿ ದಿನಾಂಕ 20.12.2024 ರಂದು ಹಗಲು 10 ಗಂಟೆಯಿಂದ 1 ಗಂಟೆ ಮಧ್ಯೆ ಮನೆಯವರು ಇಲ್ಲದೇ ಇರುವ ಸಮಯದಲ್ಲಿ ಮನೆಯ ಹಿಂಬಾಗಿಲನ್ನು ಕಾಲಿನಿಂದ ಒದ್ದು ಬಾಗಿಲು ಮುರಿದು ಮನೆಯ ಒಳಗಿದ್ದ ಗೋದ್ರೇಜನ್ನು ಮೀಟಿ ಚಿನ್ನಾಭರಣವನ್ನು ಕಳವು ಮಾಡಿಕೊಂಡು ಹೋದ ಬಗ್ಗೆ ಪ್ರಕರಣ ದಾಖಲಾಗಿದ್ದು, ಈ ರೀತಿಯ ಕಳ್ಳತನ ಪ್ರಕರಣ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಹಲವು ಕಡೆ ಅಗುತ್ತಿದ್ದು, ಜಿಲ್ಲಾ ಪೊಲೀಸ್ ಅಧೀಕ್ಷಕರ ಸೂಚನೆಯಂತೆ ಜಂಟಿ ಕಾರ್ಯಾಚರಣೆ ನಡೆಸಿ ಹಗಲು ಮನೆ ಕಳ್ಳತನ ನಡೆಸಿ ಯಾವುದೇ ಸುಳಿವು ನೀಡದೇ ಪರಾರಿಯಾಗುತ್ತಿದ್ದ ಆರೋಪಿಯನ್ನು ಅಪರಾಧ ಪತ್ತೆ ತಂಡ ಜ.10 ರಂದು ಕಳ್ಳತನಕ್ಕೆ ಉಪಯೋಗಿಸುತ್ತಿದ್ದ ಕಾರು ಸಮೇತ ಆರೋಪಿಯನ್ನು ಬಂಧಿಸಿದ್ದು, ಆರೋಪಿಯನ್ನು ವಿಚಾರಿಸಲಾಗಿ ಈತನು ಪುತ್ತೂರು ಗ್ರಾಮಾಂತರ ಠಾಣಾ ಸರಹದ್ದಿನ ಸರ್ವೆ ಗ್ರಾಮದ ಭಕ್ತಕೋಡಿ ಹಾಗೂ ಈ ಹಿಂದೆ ಕಡಬ ಠಾಣಾ ಸರಹದ್ದಿನ ಆಲಂಗಾರು ಗ್ರಾಮದ ಕಲೆರಿ ಬಂಟಾಳ ಗ್ರಾಮಾಂತರ ಸರಹದ್ದಿನ ಇರಾ ಹಾಗೂ ವಿಟ್ಲ ಪೊಲೀಸ್ ಠಾಣಾ ಸರಹದ್ದಿನ ಕೊಲಾಡು ಗ್ರಾಮದ ಕುಂಟು ಕುಡೇಲು, ಮಂಕುಡೆ, ಕಾಡುಮಠ ಇಡ್ಲಿಂದು ಗ್ರಾಮದ ಆಳಕೆ ಮಜಲು ಕಡೆಗಳಲ್ಲಿ ಹಗಲು ಸಮಯ ಕಳವು ಮಾಡಿದ ಪ್ರಕರಣಗಳಲಿ ಭಾಗಿಯಾಗಿರುವುದು ಪತ್ತೆಯಾಗಿರುತ್ತದೆ .

ಇದೊಂದು ವಿಶೇಷ ಪ್ರಕರಣ ಆಗಿದ್ದು ಆರೋಪಿಯು ಕಳ್ಳತನ ಮಾಡಿ ಯಾವುದೇ ಸುಳಿವು ಸಿಗದೆ ಪರಾರಿಯಾಗುತ್ತಿದ್ದು ಈ ಬಗ್ಗೆ ಪುತ್ತೂರು ಗ್ರಾಮಾಂತರ , ವಿಟ್ಲ, ಕಡಬ ಪೊಲೀಸರ ವಿಶೇಷ ತಂಡ ರಚಿಸಿ ಆರೋಪಿ ಪತ್ತೆಗೆ ಕಾರ್ಯಾಚರಣೆ ನಡೆಸಲಾಗಿರುತ್ತದೆ.
ಆರೋಪಿ ಹೆಸರು ವಿಳಾಸ:
ಸೂರಜ್ ಕೆ (36) ತಂದೆ ದಿ| ಕುಮಾರ ಪಿ ವಾಸ ಗುದ್ದೆ ಮನೆ ಮನೆ ಭಗವತಿ ದೇವಸ್ಥಾನ ಹತ್ತಿರ ಮನೆ ಉಪ್ಪಳ ಕಾಸರಗೋಡು ಜಿಲೆ ಕೇರಳ ರಾಜ್ಯ (ಹಾಲಿ ವಾಸ:- ನವಿಲು ಗಿರಿ ಮನೆ ಮೂಡಂಬೈಲು ಗ್ರಾಮ ಹೊಸಂಗಡಿ ಮಂಜೇಶ್ವರ ಕಾಸರಗೋಡು ಜಿಲೆ, ಕೇರಳ ರಾಜ್ಯ )
ಕಳ್ಳತನ ಪ್ರಕರಣ :ಆರೋಪಿಯ ವಿರುದ್ಧ ಪುತ್ತೂರು ಗ್ರಾಮಾಂತರ ಠಾಣೆ, ಕಡಬ ಪೊಲೀಸ್ ಠಾಣೆ,ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ,ನಾಲ್ಕು ಪ್ರಕರಣ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿವೆ,