Friday, June 27, 2025
Homeತಾಜಾ ಸುದ್ದಿನಾಳೆಯಿಂದ ಅ.30ರವರೆಗೆ ಶಾಲೆಗಳಿಗೆ ಮಧ್ಯಂತರ ರಜೆ ಘೋಷಣೆ!..

ನಾಳೆಯಿಂದ ಅ.30ರವರೆಗೆ ಶಾಲೆಗಳಿಗೆ ಮಧ್ಯಂತರ ರಜೆ ಘೋಷಣೆ!..

spot_img
- Advertisement -
- Advertisement -

ಬೆಂಗಳೂರು : ರಾಜ್ಯದ ಶಿಕ್ಷಕರಿಗೆ ಬೇಸಿಗೆ ರಜೆಯನ್ನು ಕಡಿತಗೊಳಿಸಿದ್ದರು. ಆದರೆ ಈಗ ರಾಜ್ಯ ಸರ್ಕಾರ ಅ.30ರವರೆಗೆ ಮೂರು ವಾರಗಳ ಮಧ್ಯಂತರ ರಜೆಯನ್ನು ಘೋಷಿಸಿ ಆದೇಶ ಹೊರಡಿಸಿದೆ. ಈ ಮೂಲಕ ರಾಜ್ಯದ ಶಿಕ್ಷಕರಿಗೆ ಗುಡ್ ನ್ಯೂಸ್ ನೀಡಿದೆ.

ಕೋವಿಡ್-19 ಸೋಂಕಿನ ಹಿನ್ನಲೆಯಲ್ಲಿ ಸದ್ಯಕ್ಕೆ ಶಾಲೆಗಳನ್ನು ಪ್ರಾರಂಭಿಸದಿರಲು ಮತ್ತು ವಿದ್ಯಾಗಮ ಕಾರ್ಯಕ್ರಮವನ್ನು ಸಹ ಸ್ಥಗಿತಗೊಳಿಸಲು ಈಗಾಗಲೇ ಆದೇಶಿಸಲಾಗಿದೆ.

ಹಲವಾರು ಶಿಕ್ಷಕರು ಸಹ ಕೋವಿಡ್-19 ಸೋಂಕಿಗೆ ಒಳಗಾಗಿರುವುದನ್ನ ಮಾಧ್ಯಮದ ಮೂಲಕ ಗಮನಿಸಿದ್ದೇನೆ. ಆದ್ದರಿಂದ ವಿದ್ಯಾರ್ಥಿಗಳು ಹಾಗೂ ಶಿಕ್ಷಕರುಗಳ ಆರೋಗ್ಯದ ಹಿತದೃಷ್ಠಿಯಿಂದ ಶಆಲೆಗಳಿಗೆ ದಿನಾಂಕ 12-10-2020ರಿಂದ ಮೂರು ವಾರಗಳ ಕಾಲ ಅಂದರೆ ದಿನಾಂಕ 30-10-2020ರವರೆಗೆ ಮದ್ಯಂತರ ರಜೆ ಘೋಷಿಸಿ ಆದೇಶ ಹೊರಡಿಸಲು ಹಿರಿಯ ಅಧಿಕಾರಿಗಳಿಗೆ ಈಗಾಗಲೇ ನಿರ್ದೇಶನ ನೀಡಿರುತ್ತೇನೆ ಎಂಬುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪತ್ರದ ಮುಖೇನ ಮಾಹಿತಿ ನೀಡಿದ್ದಾರೆ.

- Advertisement -
spot_img

Latest News

error: Content is protected !!