ಮಂಗಳೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪೊಲೀಸ್ ಇಲಾಖೆ, ಮಂಗಳೂರು ತಾಲೂಕು ಆರೋಗ್ಯಧಿಕಾರಿ ಕಚೇರಿ ಹಾಗೂ ಮಂಗಳೂರಿನ ಸೇಂಟ್ ಅಲೋಶಿಯಸ್ ಕಾಲೇಜು(ಸ್ವಾಯತ್ತ) ಸಂಯುಕ್ತಾಶ್ರಯದಲ್ಲಿ ಅಂತರಾಷ್ಟ್ರೀಯ ಮಾದಕ ವ್ಯಸನ ವಿರೋಧಿ ಮತ್ತು ಅಕ್ರಮ ಸಾಗಾಟ ತಡೆಗಟ್ಟುವಿಕೆ ದಿನವನ್ನು ಇದೇ ಜುಲೈ 02ರ ಶನಿವಾರ ಬೆಳಿಗ್ಗೆ ನಗರದ ಸೇಂಟ್ ಅಲೋಶಿಯಸ್ (ಸ್ವಾಯತ್ತ) ಕಾಲೇಜಿನ ಎರಿಕ್ ಮಥಾಯಸ್ ಸಭಾಂಗಣದಲ್ಲಿ ಆಯೋಜಿಸಲಾಯಿತು.
ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.ಸೇಂಟ್ ಅಲೋಶಿಯಸ್ (ಸ್ವಾಯತ್ತ) ಕಾಲೇಜಿನ ಪ್ರಾಂಶುಪಾಲರಾದ ರೇ.ಡಾ. ಪ್ರವೀಣ್ ಮಾರ್ಟಿಸ್ ಎಸ್.ಕೆ ಅಧ್ಯಕ್ಷತೆ ವಹಿಸಿದರು.
ಮುಖ್ಯ ಅಥಿತಿಗಳಾಗಿ ಮಂಗಳೂರು ನಗರ ಪೆಂಲೀಸ್ ಆಯುಕ್ತ ಶಶಿ ಕುಮಾರ್,ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್,ಜಿಲ್ಲಾ ಪೊಲೀಸ್ ಎಸ್ಪಿ ಋಷಿಕೇಶ್ ಭಗವಾನ್ ಸೊನವಾಣೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕಿಶೋರ್ ಕುಮಾರ್, ಸೇಂಟ್ ಅಲೋಶಿಯಸ್ (ಸ್ವಾಯತ್ತ) ಕಾಲೇಜಿನ ನೋಂದಣಿದಾರ ಹಾಗೂ ಪರೀಕ್ಷೆಗಳ ನಿಯಂತ್ರಕ ಆಲ್ವಿನ್ ಡಿ. ಸೋಜ ಭಾಗವಹಿಸಿದರು.
ಸಂಪನ್ಮೂಲ ವ್ಯಕ್ತಿಯಾಗಿ ಕೆ.ಎಂ.ಸಿ ಆಸ್ಪತ್ರೆಯ ಮಾನಸಿಕ ಆರೋಗ್ಯ ತಜ್ಞರು ಮತ್ತು ಸಹಾಯಕ ಪ್ರಾಧ್ಯಾಪಕರಾದ ಡಾ. ಶಾರಣ್ಯ ಶೆಟ್ಟಿ ಭಾಗವಹಿಸಿದರು.


