ಅಂತಾರಾಷ್ಟ್ರೀಯ ಮಹಿಳಾ ಕಬಡ್ಡಿ ಕ್ರೀಡಾಪಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಅರಿಶಿನಕುಂಟೆ ಆದರ್ಶನಗರದ ನಿವಾಸದಲ್ಲಿ ಧನಲಕ್ಷ್ಮೀ (25) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮೈಸೂರು ದಸರಾವನ್ನು ತನ್ನ ಸ್ನೇಹಿತರೊಂದಿಗೆ ನೋಡಿಕೊಂಡು ಬಂದಿದ್ದ ಧನಲಕ್ಷ್ಮೀ ತಮ್ಮ ನಿವಾಸದಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿರ್ದಿಷ್ಟ ಕಾರಣ ತಿಳಿದುಬಂದಿಲ್ಲ. ಯಾವುದೋ ಕಾರಣಕ್ಕೆ ಮನನೊಂದು ಈ ನಿರ್ಧಾರವನ್ನು ತೆಗೆದುಕೊಂಡಿರಬಹುದು ಎಂದು ಮೃತ ಯುವತಿಯ ಪೋಷಕರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಧನಲಕ್ಷ್ಮೀ ಅಂತಾರಾಷ್ಟ್ರೀಯ ಮಟ್ಟದಲ್ಲಿ 3 ಬಾರಿ ಕಬ್ಬಡಿ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಪ್ರಸ್ತುತ ಕಾಡುಗೋಡಿ ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದರು.
ಘಟನೆಯ ಕುರಿತು ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಖುಷಿಯಲ್ಲಿಯೇ ಇದ್ದ ಆಕೆ, ಬರೀ 25 ವರ್ಷಕ್ಕೆ ಇಂತಹ ದೊಡ್ಡ ನಿರ್ಧಾರ ಕೈಗೊಂಡಿದ್ದು ಏಕೆ? ಎಂದು ಹೆತ್ತವರು ಕಣ್ಣೀರಿಟ್ಟಿದ್ದಾರೆ.