Monday, June 8, 2026
Homeಕರಾವಳಿಪುತ್ತೂರಿನಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸರಿಂದ ಹಲ್ಲೆ ಪ್ರಕರಣ: ಗಾಯಾಳುಗಳನ್ನು ಭೇಟಿಯಾದ ಅಂತಾರಾಷ್ಟ್ರೀಯ ಮಾನವ ಹಕ್ಕುಗಳ...

ಪುತ್ತೂರಿನಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸರಿಂದ ಹಲ್ಲೆ ಪ್ರಕರಣ: ಗಾಯಾಳುಗಳನ್ನು ಭೇಟಿಯಾದ ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಮುಖ್ಯಸ್ಥರು

- Advertisement -
- Advertisement -

ಪುತ್ತೂರಿನಲ್ಲಿ  ಪೊಲೀಸರಿಂದ ಹಲ್ಲೆಗೊಳಗಾಗಿ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿಂದೂ ಕಾರ್ಯಕರ್ತರನ್ನು ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಮುಖ್ಯಸ್ಥರು ಆಸ್ಪತ್ರೆಯಲ್ಲಿ ಭೇಟಿಯಾದರು..

ಆಸ್ಪತ್ರೆಯಲ್ಲಿ ದಾಖಲಾಗಿರುವ ಅಭಿ ಯಾನೆ ಅವಿನಾಶ್ ಹಾಗೂ ಗುರುಪ್ರಸಾದ್ ಅವರನ್ನು ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಕಾರ್ಯನಿರ್ವಾಹಕ ನಿರ್ದೇಶಕ ರೋಹಿತ್ ಕುಮಾರ್ ಕಟೀಲು ಮತ್ತು ಆಯೋಗದದ ಕಾನೂನು ಸಲಹೆಗಾರ ಸುನಿಲ್‌ ಕುಮಾರ್ ಶೆಟ್ಟಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು  ಕಾನೂನನ್ನು ಮೀರಿ ಅಮಾನುಷವಾಗಿ ನಡೆಸಿಕೊಂಡ ಪೊಲೀಸ್ ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕು ಎಂದು ತಿಳಿಸಿದ ಅವರು ಅಮಾಯಕರಿಗೆ ಅಂತರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ವತಿಯಿಂದ ಸೂಕ್ತ ರೀತಿಯಲ್ಲಿ ಸಹಾಯ ಮಾಡುವುದಾಗಿ ಭರವಸೆ ನೀಡಿದರು.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವಿನಾಶ್ ಮತ್ತು ಗುರುಪ್ರಸಾದ್ ಅವರಿಗೆ ಆಯೋಗದ ವತಿಯಿಂದ ಇದೇ ಸಂದರ್ಭದಲ್ಲಿ ಧನಸಹಾಯ ಮಾಡಲಾಯಿತು.ಈ ಸಂದರ್ಭ ಅರುಣ್ ಕುಮಾರ್ ಪುತ್ತಿಲ, ರಾಘವ ದೇವಾಡಿಗ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

- Advertisement -

Latest News

error: Content is protected !!