Wednesday, May 15, 2024
Homeಕರಾವಳಿಮಂಗಳೂರು ಫಿಸಿಯೋಕಾನ್-2023 ಅಂತಾರಾಷ್ಟ್ರೀಯ ಫಿಸಿಯೋಥೆರಪಿ ಸಮ್ಮೇಳನಕ್ಕೆ ಚಾಲನೆ

ಮಂಗಳೂರು ಫಿಸಿಯೋಕಾನ್-2023 ಅಂತಾರಾಷ್ಟ್ರೀಯ ಫಿಸಿಯೋಥೆರಪಿ ಸಮ್ಮೇಳನಕ್ಕೆ ಚಾಲನೆ

spot_img
- Advertisement -
- Advertisement -

ಮಂಗಳೂರು: ಮಂಗಳೂರು ಫಿಸಿಯೋಕಾನ್ – 2023 ಅಂತರಾಷ್ಟ್ರೀಯ ಫಿಸಿಯೋಥೆರಪಿ ಸಮ್ಮೇಳನ ಮಂಗಳೂರಿನಲ್ಲಿ ಇಂದು ಉದ್ಘಾಟನೆಗೊಂಡಿತು.

ಸೌತ್ ಕೆನರಾ ಫಿಸಿಯೋಥೆರಪಿ ಶಿಕ್ಷಕರ ಸಂಘದ ವತಿಯಿಂದ ಆಯೋಜಿಸಲಾಗಿದ್ದ ಸಮ್ಮೇಳನವನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸಮ್ಮೇಳನವನ್ನು ಉದ್ಘಾಟಿಸಿದರು.

ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ರಾಜ್ಯಪಾಲರು, ಯೋಗ ಮತ್ತು ವ್ಯಾಯಾಮವು ದೈಹಿಕ ಚಿಕಿತ್ಸೆಗೆ ನಿಕಟ ಸಂಬಂಧ ಹೊಂದಿದೆ. ಫಿಸಿಯೋಥೆರಪಿ, ಯೋಗ ಮತ್ತು ವ್ಯಾಯಾಮದ ಜೊತೆಗೆ ದೇಹದ ಅನೇಕ ಸಮಸ್ಯೆಗಳನ್ನು ಪರಿಹರಿಸಲು ಬಳಸಬಹುದು. ಅದಕ್ಕಾಗಿಯೇ ಫಿಸಿಯೋಥೆರಪಿ ಜತೆಗೆ ಯೋಗಕ್ಕೂ ಆದ್ಯತೆ ನೀಡಬೇಕು ಎಂದು ಹೇಳಿದರು.

ಇಂದು ವಿಶ್ವ ಫಿಸಿಯೋಥೆರಪಿ ದಿನದ ಅಂಗವಾಗಿ ಆಯೋಜಿಸಲಾಗಿರುವ ಈ ಸಮ್ಮೇಳನದಲ್ಲಿ “ಭೌತಚಿಕಿತ್ಸೆ(ಫಿಸಿಯೋಥೆರಪಿ)ಯ ಸಂಭಾವ್ಯತೆಯನ್ನು ಅನ್ಲಾಕ್ ಮಾಡಲು ಸಂಪರ್ಕಿಸಿ” ಎಂಬ ವಿಷಯದ ಕುರಿತು ಚರ್ಚೆ ನಡೆಯಿತು.ಕಾರ್ಯಕ್ರಮದಲ್ಲಿ ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್, ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್, ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!