Wednesday, July 15, 2026
Homeಕರಾವಳಿಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಈಜು ಕೊಳ ಉದ್ಘಾಟನೆ ಮತ್ತು ರಾಷ್ಟ್ರೀಯ ಈಜು ಚಾಂಪಿಯನ್‌ಷಿಪ್‌ ಗೆ ಚಾಲನೆ

ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಈಜು ಕೊಳ ಉದ್ಘಾಟನೆ ಮತ್ತು ರಾಷ್ಟ್ರೀಯ ಈಜು ಚಾಂಪಿಯನ್‌ಷಿಪ್‌ ಗೆ ಚಾಲನೆ

- Advertisement -
- Advertisement -

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ ಮತ್ತು ಮಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ವತಿಯಿಂದ ಮಂಗಳೂರಿನ ಎಮ್ಮೆಕೆರೆ ಬಳಿ ನೂತನವಾಗಿ ನಿರ್ಮಿಸಿರುವ ಅಂತರಾಷ್ಟ್ರೀಯ ಈಜುಕೊಳ ಉದ್ಘಾಟನೆಗೊಂಡಿದೆ.

ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್. ಸುರೇಶ ಇಂದು ಜ್ಯೋತಿ ಬೆಳಗಿಸುವುದರ ಮೂಲಕ ಈಜುಕೊಳವನ್ನು ಉದ್ಘಾಟಿಸಿದರು.ಇದೇ ವೇಳೆ 19ನೇ ರಾಷ್ಟ್ರೀಯ ಈಜು ಚಾಂಪಿಯನ್‌ಷಿಪ್‌ ಪಂದ್ಯಗಳಿಗೆ ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಲಾಯಿತು.

ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್, ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ವೇದವ್ಯಾಸ ಕಾಮತ್, ವಿಧಾನ ಪರಿಷತ್ ಸದಸ್ಯ ‌ಮಂಜುನಾಥ್ ಭಂಡಾರಿ, ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಸುಧೀರ್ ಶೆಟ್ಟಿ ಪಾಲ್ಗೊಂಡಿದ್ದರು.

ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಲ್. ಕೆ. ಅತೀಕ್, ಜಿಲ್ಲಾಧಿಕಾರಿ ಮುಲ್ಲೈ ಮಹಿಲನ್ ಸೇರಿದಂತೆ ‌ಜಿಲ್ಲೆಯ ಜನಪ್ರತಿನಿಧಿಗಳು, ಅಧಿಕಾರಿ ವರ್ಗದವರು ಹಾಗೂ ಈಜು ಸ್ಪರ್ಧಿಗಳು ಉಪಸ್ಥಿತರಿದ್ದರು.

- Advertisement -

Latest News

error: Content is protected !!