Saturday, April 27, 2024
HomeUncategorizedಅಂತರ್ ರಾಜ್ಯ ನಟೋರಿಯಸ್ ಕಳ್ಳಿಯನ್ನು ಬಂಧಿಸಿದ ಪುತ್ತೂರು ಪೊಲೀಸರು; ಸುಮಾರು 6 ಲಕ್ಷ ಮೌಲ್ಯದ ಚಿನ್ನಾಭರಣ...

ಅಂತರ್ ರಾಜ್ಯ ನಟೋರಿಯಸ್ ಕಳ್ಳಿಯನ್ನು ಬಂಧಿಸಿದ ಪುತ್ತೂರು ಪೊಲೀಸರು; ಸುಮಾರು 6 ಲಕ್ಷ ಮೌಲ್ಯದ ಚಿನ್ನಾಭರಣ ವಶ

spot_img
- Advertisement -
- Advertisement -

ಪುತ್ತೂರು; ಅಂತರ್ ರಾಜ್ಯ ನಟೋರಿಯಸ್ ಕಳ್ಳಿಯನ್ನು ಬಂಧಿಸಿದ ಪುತ್ತೂರು ಪೊಲೀಸರು ಸುಮಾರು 6 ಲಕ್ಷ ಮೌಲ್ಯದ ಚಿನ್ನಾಭರಣವನ್ನು ವಶಕ್ಕೆ ಪಡೆದಿದ್ದಾರೆ. ಈಶ್ವರಿ (45) ಬಂಧಿತ ಕಳ್ಳಿ.

ದಿನಾಂಕ:12.02.2024 ರಂದು ಪುತ್ತೂರು ನಗರದ KSRTC ಬಸ್ ನಿಲ್ದಾಣದಲ್ಲಿ ರೇಷ್ಮಾ ಎನ್ (41) ಎಂಬವರ ಬ್ಯಾಗಿನಲ್ಲಿದ್ದ ಚಿನ್ನಾಭರಣಗಳನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋದ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.

ಈ ಪ್ರಕರಣವನ್ನು ಪುತ್ತೂರು ನಗರ ಠಾಣಾ ಪೊಲೀಸರು ವಿವಿಧ ಆಯಾಮಗಳಿಂದ ತನಿಖೆ ನಡೆಸಿ ಸದ್ರಿ ಪ್ರಕರಣದ ಆರೋಪಿ ತಮಿಳುನಾಡು ಮೂಲದ ಅಂತರ್ ರಾಜ್ಯ ನಟೋರಿಯಸ್ ಕಳ್ಳಿಯಾದ ಈಶ್ವರಿ (45) ಎಂಬಾಕೆಯನ್ನು ವಶಕ್ಕೆ ಪಡೆದು, ಸುಮಾರು 6 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ.

- Advertisement -
spot_img

Latest News

error: Content is protected !!