ಕಾರ್ಕಳ: ಶಾಲೆ, ಕಾಲೇಜುಗಳಲ್ಲಿ ಕಳವು ಮಾಡುತ್ತಿದ್ದ ಅಂತರರಾಜ್ಯ ಕಳ್ಳನನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ. ಬೈಂದೂರು ಯೋಜನಾ ನಗರಗದ ಅರ್ಷಿತ್ ಅವಿನಾಶ್ ದೋಡ್ರೆ (24) ಬಂಧಿತ ಆರೋಪಿ.
ಮಾ.20ರಂದು ನಿಟ್ಟೆ ಗ್ರಾಮದ ಸಂತ ಲಾರೆನ್ಸ್ ಪ್ರೌಢ ಶಾಲೆಯ ಸಮೀಪ ಬಂಧಿಸಿದ್ದು, ಆತನಿಂದ ಕಾರ್ಕಳ ಪೊಲೀಸರು ಕೃತ್ಯಕ್ಕೆ ಬಳಸಿದ್ದ ಸುಮಾರು 2,00,000ರೂ. ಮೌಲ್ಯದ ಕಾರು, 20,000ರೂ. ಮೌಲ್ಯದ ಮೊಬೈಲ್ ಫೋನ್, 84,500 ರೂ. ನಗದು ಮತ್ತು ಇತರೆ ಸೊತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಫೆ.21ರಂದು ರಾತ್ರಿ ವೇಳೆ ಕಾರ್ಕಳ ತಾಲೂಕಿನ ಬೆಳ್ಯಣ್ ಗ್ರಾಮದ ಸಂತ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆಯ ಕಚೇರಿಗೆ ನುಗ್ಗಿ 1,50,000ರೂ. ಮತ್ತು 3 ಡಿವಿಆರ್‌ಗಳನ್ನು ಕಳವು ಮಾಡಿಕೊಂಡು ಹೋಗಿ ರುವ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅದೇ ರೀತಿ ಮಾ.6ರಂದು ರಾತ್ರಿ ಕಾರ್ಕಳ ತಾಲೂಕು ನಂದಳಿಕೆ ಗ್ರಾಮದ ಸ.ಹಿ.ಪ್ರಾ.ಶಾಲೆಯ ಮುಖ್ಯ ಶಿಕ್ಷಕರ ಕೊಠಡಿಗೆ ನುಗ್ಗಿ ಸೊತ್ತುಗಳನ್ನು ಚೆಲ್ಲಾಪಿಲ್ಲಿ ಮಾಡಿ ಕಳವಿಗೆ ಯತ್ನಿಸಿರುವ ಬಗ್ಗೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮಾ.4ರಂದು ರಾತ್ರಿ ಕಾರ್ಕಳ ತಾಲೂಕು ಹೀರ್ಗಾನ ಗ್ರಾಮದ ಸಂತ ಮರಿಯಾ ಗೊರಟ್ಟಿ ಆಂಗ್ಲ ಮಾದ್ಯಮ ಶಾಲೆಯ ಕಚೇರಿಯ ಬೀಗ ಮುರಿದು ಒಳನುಗ್ಗಿ ಸಿಸಿ ಕ್ಯಾಮರಾ ಡಿವಿಆ ಕಳವು ಮಾಡಿರುವ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.