Friday, June 5, 2026
Homeಕರಾವಳಿಪುತ್ತೂರಿನಲ್ಲಿ ಅಂತರರಾಜ್ಯ ಕಳ್ಳನ ಬಂಧನ; ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ವಶ

ಪುತ್ತೂರಿನಲ್ಲಿ ಅಂತರರಾಜ್ಯ ಕಳ್ಳನ ಬಂಧನ; ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ವಶ

- Advertisement -
- Advertisement -

ಪುತ್ತೂರು: 2021ನೇ ಜುಲೈ ತಿಂಗಳಿನಲ್ಲಿ ಪುತ್ತೂರು ಗ್ರಾಮಾಂತರ ಠಾಣೆ ವ್ಯಾಪ್ತಿಯ ಕೆಯ್ಯೂರು ಗ್ರಾಮದ ಕಟ್ಟತ್ತಾರು, ಕೆಯ್ಯೂರು, ಮಾಡಾವು ಪರಿಸರದಲ್ಲಿ ಸರಣಿ ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಅಂತರರಾಜ್ಯ ಕಳ್ಳನನ್ನು ಬಂಧಿಸಿದ್ದಾರೆ,

ಈ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಪುತ್ತೂರು ಗ್ರಾಮಾಂತರ ಠಾಣಾ ಪಿಎಸ್‌ಐ ಉದಯ ರವಿ.ಎಂ.ವೈ ಮತ್ತು ರಾಮಕೃಷ್ಣ, ರವರ ನೇತೃತ್ವದ ತಂಡ ಕಣ್ಣೂರು ಜಿಲ್ಲೆಯ ಆರೋಪಿ ಮಹಮ್ಮದ್ ಕೆ.ಯು (42) ಎಂಬಾತನನ್ನು ಬಂಧಿಸಿದ್ದಾರೆ.

ಆರೋಪಿಯು ಕಳೆದ ವರ್ಷ ಬೆಳ್ಳಾರೆ ಠಾಣಾ ವ್ಯಾಪ್ತಿಯ ಸವಣೂರು ಹಾಗೂ ಬೆಳಂದೂರಿನ ಪಳ್ಳತ್ತಾರು ಪರಸರಗಳಲ್ಲಿ ಮನೆ ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ದು, ಈತನಿಂದ ಸುಮಾರು 2,50,000 /- ರೂ ಮೌಲ್ಯದ ಚಿನ್ನಾಭರಣ ಹಾಗೂ ಕಳವುಗೈದ ಬೈಕ್ ನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ಅಲ್ಲದೇ ಈತನು ಕೊಣಾಜೆ, ವಿಟ್ಲ, ಬಂಟ್ವಾಳ, ಪುಂಜಾಲಕಟ್ಟೆ ಪರಸರಗಳಲ್ಲಿ ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿರುತ್ತಾನೆ. ಈತನ ವಿರುದ್ಧ ಈಗಾಗಲೇ ಕೇರಳ ರಾಜ್ಯದಲ್ಲಿ 120 ಕ್ಕಿಂತಲೂ ಹೆಚ್ಚು ಕಳ್ಳತನ ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

Latest News

error: Content is protected !!