Wednesday, June 3, 2026
Homeಅಪರಾಧಮಾದಕ ದ್ರವ್ಯ ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅಸಭ್ಯ ವರ್ತನೆ

ಮಾದಕ ದ್ರವ್ಯ ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅಸಭ್ಯ ವರ್ತನೆ

- Advertisement -
- Advertisement -

ಉಪ್ಪಿನಂಗಡಿ ಠಾಣೆಯ ಪೊಲೀಸರು ಸೋಮವಾರದಂದು ಮಾದಕ ದ್ರವ್ಯ ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅನುಚಿತವಾಗಿ ವರ್ತಿಸಿದ ಆರೋಪದ ಮೇರೆಗೆ ಕಾರ್ಯಾಚರಣೆ ನಡೆಸಿ ಆರೋಪಿಗಳ ವಿರುದ್ಧ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

ಇಬ್ಬರು ವ್ಯಕ್ತಿಗಳು ಅಮಲು ಪದಾರ್ಥ ಸೇವಿಸಿ ಉಪ್ಪಿನಂಗಡಿ ನೇತ್ರಾವತಿ ಸೇತುವೆಯ ಬಳಿ ಸಾರ್ವಜನಿಕ ಸ್ಥಳದಲ್ಲಿ ಅನುಚಿತವಾಗಿ ವರ್ತಿಸುತ್ತಿದ್ದರು. ಉಪ್ಪಿನಂಗಡಿ ಪೊಲೀಸ್ ಠಾಣಾ ಪಿಎಸ್ಸೆ ಅವಿನಾಶ್ ಎಚ್ ನೇತೃತ್ವದ ಪೊಲೀಸರು ಕಡಬ ತಾಲೂಕು ಸವಣೂರು ಗ್ರಾಮದ ನಿವಾಸಿಗಳಾದ ನವಾಝ್ ಮಾಂತೂರು (35) ಹಾಗೂ ಪ್ರಮೋದ್ ಎಂಬವರುಗಳನ್ನು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ನವಾಝ್ ಮಾಂತೂ‌ರು ಎಂಬಾತ ಮಾದಕ ದ್ರವ್ಯ ಸೇವನೆ ಮಾಡಿರುವುದು ದೃಢಪಟ್ಟಿರುತ್ತದೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸಲಾಗುತ್ತಿದೆ.

- Advertisement -

Latest News

error: Content is protected !!