Wednesday, June 3, 2026
Homeಕರಾವಳಿಉಡುಪಿಮದ್ಯದ ಅಮಲಿನಲ್ಲಿದ್ದ ವಿದ್ಯಾರ್ಥಿಗಳು ರಂಪಾಟ; ಮದ್ಯದ ಅಮಲಿನಲ್ಲಿ ಬಟ್ಟೆ ಹರಿಯುವಂತೆ ಹೊಡೆದಾಡಿಕೊಂಡ ವಿದ್ಯಾರ್ಥಿಗಳು!

ಮದ್ಯದ ಅಮಲಿನಲ್ಲಿದ್ದ ವಿದ್ಯಾರ್ಥಿಗಳು ರಂಪಾಟ; ಮದ್ಯದ ಅಮಲಿನಲ್ಲಿ ಬಟ್ಟೆ ಹರಿಯುವಂತೆ ಹೊಡೆದಾಡಿಕೊಂಡ ವಿದ್ಯಾರ್ಥಿಗಳು!

- Advertisement -
- Advertisement -

ಉಡುಪಿ: ಮಣಿಪಾಲ್‍ನ ಕಾಯಿನ್ ಸರ್ಕಲ್ ಬಳಿ ಮದ್ಯದ ಅಮಲಿನಲ್ಲಿ ಎರಡು ವಿದ್ಯಾರ್ಥಿಗಳ ಗುಂಪು ಬಡಿದಾಡಿಕೊಂಡ ಘಟನೆ ನಡೆದಿದೆ.

ಮದ್ಯದ ಅಮಲಿನಲ್ಲಿದ್ದ ವಿದ್ಯಾರ್ಥಿಗಳು ಬಾರ್ ಒಂದರ ಮುಂದೆ ರಂಪಾಟ ನಡೆಸಿದ್ದು, ಗಲಾಟೆಯಲ್ಲಿ ಓರ್ವ ವಿದ್ಯಾರ್ಥಿಯ ಬಟ್ಟೆ ಹರಿದು ಹೋಗುವವರೆಗೂ ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ವಿದ್ಯಾರ್ಥಿಗಳು ಸ್ಥಳಕ್ಕೆ ಪೊಲೀಸರು ಬರುತ್ತಿದ್ದಂತೆ ಹೊಡೆದಾಡಿಕೊಂಡು ಅಲ್ಲಿಂದ ಪರಾರಿಯಾಗಿದ್ದಾರೆ.

ವಿದ್ಯಾರ್ಥಿಗಳ ಹೊಡೆದಾಟಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಮಣಿಪಾಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

- Advertisement -

Latest News

error: Content is protected !!