Friday, June 26, 2026
Homeತಾಜಾ ಸುದ್ದಿಪಿಎಸ್ಐ ನೇಮಕಾತಿ ಅಕ್ರಮ : ಆಡಿಯೋ ತನಿಖೆ ಮಾಡಿ ತಪ್ಪಿತಸ್ಥರ ವಿರುದ್ಧ ಕ್ರಮ: ಸಿಎಂ

ಪಿಎಸ್ಐ ನೇಮಕಾತಿ ಅಕ್ರಮ : ಆಡಿಯೋ ತನಿಖೆ ಮಾಡಿ ತಪ್ಪಿತಸ್ಥರ ವಿರುದ್ಧ ಕ್ರಮ: ಸಿಎಂ

- Advertisement -
- Advertisement -

ಬೆಂಗಳೂರು: ಪಿಎಸ್ ಐ ನೇಮಕಾತಿಯ ಯಾವುದೇ ಬ್ಯಾಚ್ ನಲ್ಲಿ  ಅಕ್ರಮವಾಗಿದ್ದರೂ ತನಿಖೆ ಕೈಗೊಂಡು ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಅವರು ಇಂದು ತಮ್ಮ ನಿವಾಸದ ಬಳಿ  ಮಾಧ್ಯಮದವರೊಂದಿಗೆ ಮಾತನಾಡಿ, ಶಾಸಕ ಪ್ರಿಯಾಂಕ ಖರ್ಗೆ ಬಿಡುಗಡೆ ಮಾಡಿರುವ ಆಡಿಯೋ ನಾನು ಕೇಳಿಲ್ಲ. ಯಾವ ಮೆಟೀರಿಯಲ್ ಇದ್ದರೂ ತನಿಖೆಯಾಗುತ್ತದೆ. ಇಬ್ಬರ ನಡುವೆ ಮಾತುಕತೆಯಾಗಿದೆ. ಅವರಿಬ್ಬರು ಯಾರು, ಅವರ ಅರ್ಹತೆ ಏನು ಎನ್ನುವುದು ತನಿಖೆಯಲ್ಲಿ ತಿಳಿಯುತ್ತದೆ. ಆಡಿಯೋವನ್ನು ಸಹ ತನಿಖೆಗೆ ಒಳಪಡಿಸಿ ಯಾರೇ ತಪ್ಪಿತಸ್ಥರಿದ್ದರೂ, ಯಾವುದೇ ಬ್ಯಾಚ್ ಆಗಿದ್ದರೂ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

- Advertisement -

Latest News

error: Content is protected !!