Wednesday, June 10, 2026
HomeUncategorizedಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ಆಹ್ವಾನ

ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ಆಹ್ವಾನ

- Advertisement -
- Advertisement -

ಬೆಳ್ತಂಗಡಿ : ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳಾದ ಗೌರವಾನ್ವಿತ ಮೊಹಮ್ಮದ್ ನವಾಜ್, ಗೌರವಾನ್ವಿತ ವಿಶ್ವಜಿತ್ ಶೆಟ್ಟಿ, ಗೌರವಾನ್ವಿತ ರಾಜೇಶ್ ರೈ, ಕೆ ಮತ್ತು ಕರ್ನಾಟಕ ಸರ್ಕಾರದ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಯವರುಗಳನ್ನು ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷರಾದ ಅಲೋಶಿಯಸ್ ಎಸ್ ಲೋಬೋ ಮತ್ತು ಅಪರ ಸರ್ಕಾರಿ ವಕೀಲ, ಕಟ್ಟಡ ಸಮಿತಿ ಸದಸ್ಯ ಮನೋಹರ ಕುಮಾರ್ ರವರುಗಳು ಬೆಂಗಳೂರಿನಲ್ಲಿ ಮತ್ತು ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳು, ದ ಕ ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿಗಳಾದ ಗೌರವಾನ್ವಿತ ಹೆಚ್ ಟಿ ನರೇಂದ್ರ ಪ್ರಸಾದ್ ಮತ್ತು ನ್ಯಾಯಮೂರ್ತಿ ಮುರಳೀಧರ ಪೈ ಯವರುಗಳನ್ನು ಹೈಕೋರ್ಟ್ ನ ಧಾರವಾಡ ಪೀಠದಲ್ಲಿ ಬೆಳ್ತಂಗಡಿ ವಕೀಲರ ಸಂಘದ ಉಪಾಧ್ಯಕ್ಷರಾದ ಶ್ರೀನಿವಾಸ ಗೌಡ ಮತ್ತು ಮಾಜಿ ಅಧ್ಯಕ್ಷರಾದ ವಸಂತ ಮರಕಡ ರವರು ಭೇಟಿ ಮಾಡಿ ಜೂನ್ 14 ನೇ ಆದಿತ್ಯವಾರದಂದು ನಡೆಯಲಿರುವ ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ನೀಡಿದರು.

- Advertisement -

Latest News

error: Content is protected !!