Friday, June 5, 2026
Homeತಾಜಾ ಸುದ್ದಿಮಂಗಳೂರು ದಸರಾ ಉದ್ಘಾಟನೆಗೆ ಸಿಎಂರನ್ನು ಸ್ವತಃ ನಾನೇ ಆಹ್ವಾನಿಸುತ್ತೇನೆ: ಜನಾರ್ದನ ಪೂಜಾರಿ

ಮಂಗಳೂರು ದಸರಾ ಉದ್ಘಾಟನೆಗೆ ಸಿಎಂರನ್ನು ಸ್ವತಃ ನಾನೇ ಆಹ್ವಾನಿಸುತ್ತೇನೆ: ಜನಾರ್ದನ ಪೂಜಾರಿ

- Advertisement -
- Advertisement -

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದಲ್ಲಿ ಜರುಗಲಿರುವ ಮಂಗಳೂರು ದಸರಾ ಮಹೋತ್ಸವದ ಉದ್ಘಾಟನೆಗೆ ಸಿಎಂ ಬಸವರಾಜ ಬೊಮ್ಮಾಯಿಯವರಿಗೆ ಆಹ್ವಾನಿಸಲಾಗುವುದು. ಆಮಂತ್ರಣ ಪತ್ರಿಕೆಯನ್ನು ಅವರಿಗೆ ಕಳುಹಿಸಿ ಸ್ವತಃ ನಾನೇ ಆಹ್ವಾನಿಸುತ್ತೇನೆ. ಅವರ ಸಮಯ ಗೊತ್ತುಪಡಿಸಿ ಉದ್ಘಾಟನೆ ಸಮಯ ನಿಗಧಿಪಡಿಸಲಾಗುವುದು ಎಂದು ಕ್ಷೇತ್ರದ ಅಭಿವೃದ್ಧಿಯ ರೂವಾರಿ ಬಿ. ಜನಾರ್ದನ ಪೂಜಾರಿ ತಿಳಿಸಿದ್ದಾರೆ.

ದಸರಾ ಮಹೋತ್ಸವದ ಅಂಗವಾಗಿ ಶ್ರೀಕ್ಷೇತ್ರದಲ್ಲಿ ನಡೆದ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ಶ್ರೀಕ್ಷೇತ್ರ ಕುದ್ರೋಳಿಯಲ್ಲಿ ಸೆ.26 ರಿಂದ ಅ.6 ರವರೆಗೆ ದಸರಾ ಮಹೋತ್ಸವ ನಡೆಯಲಿದೆ. ಈ ಬಾರಿ ಅದ್ಧೂರಿಯಾಗಿ ದಸರಾ ಮಹೋತ್ಸವ ನಡೆಯಲಿದೆ ಎಂದು ಬಿ.ಜನಾರ್ದನ ಪೂಜಾರಿ ಹೇಳಿದರು.

- Advertisement -

Latest News

error: Content is protected !!