Monday, June 8, 2026
Homeಕ್ರೀಡೆಕ್ರಿಕೆಟ್ ಪ್ರೇಮಿಗಳಿಗೆ ಸಿಹಿ ಸುದ್ದಿ: ಏಪ್ರಿಲ್ 9ರಿಂದ IPL 2021 ಆರಂಭ..!

ಕ್ರಿಕೆಟ್ ಪ್ರೇಮಿಗಳಿಗೆ ಸಿಹಿ ಸುದ್ದಿ: ಏಪ್ರಿಲ್ 9ರಿಂದ IPL 2021 ಆರಂಭ..!

- Advertisement -
- Advertisement -

ಹೊಸದಿಲ್ಲಿ: ಈ ಬಾರಿಯ ಐಪಿಎಲ್‌ ಎ. 9ರಿಂದ ಮೇ 30ರ ತನಕ ನಡೆಯಲಿದೆ ಎಂದು ವರದಿಯೊಂದು ತಿಳಿಸಿದೆ. ಆದರೆ
ಇದು ಇನ್ನೂ ಅಧಿಕೃತವಾಗಿಲ್ಲ. ಈ ಬಾರಿಯ ಐಪಿಎಲ್‌ ಭಾರತದಲ್ಲೇ ನಡೆಯುವುದು ಬಹುತೇಕ ಖಚಿತ.

ವರದಿ ಪ್ರಕಾರ ಬಿಸಿಸಿಐ ಈ ಬಾರಿಯ ಐಪಿಎಲ್‌ಗಾಗಿ 6 ತಾಣಗಳನ್ನು ಅಂತಿಮಗೊಳಿಸಿದೆ. ಬೆಂಗಳೂರು, ಮುಂಬೈ, ಚೆನ್ನೈ, ಕೋಲ್ಕತಾ, ನವದೆಹಲಿ ಅಲ್ಲದೇ ಗುಜರಾತ್ ನ ನೂತನ ಅಹಮದಾಬಾದ್ ಕ್ರೀಡಾಂಗಣ ಆತಿಥ್ಯ ವಹಿಸಲಿವೆ. 52 ದಿನಗಳ ಟೂರ್ನಿ ಇದಾಗಲಿದ್ದು, ಒಟ್ಟು 60 ಪಂದ್ಯಗಳು ನಡೆಯಲಿವೆ ಎಂದು ವರದಿ ತಿಳಿಸಿದೆ.

ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯ ಮೂರನೇ ಹಾಗೂ ಕೊನೆಯ ಪಂದ್ಯ ಮಾರ್ಚ್ 28ರಂದು ಪುಣೆಯಲ್ಲಿ ನಡೆಯಲಿದೆ. ಭಾರತದ ಅಂತಾರಾಷ್ಟ್ರೀಯ ವೇಳಾಪಟ್ಟಿಯನ್ನು ಗಮನದಲ್ಲಿಟ್ಟುಕೊಂಡು ಜನಪ್ರಿಯ ಟಿ20 ಲೀಗ್ ನ ಅವಧಿಯನ್ನು ನಿಗದಿಗೊಳಿಸಲಾಗಿದೆ ಎನ್ನಲಾಗಿದೆ.

ಎಲ್ಲ ಮುಂಜಾಗ್ರತೆ, ಸುರಕ್ಷತಾ ಕ್ರಮಗಳೊಂದಿಗೆ ಪಂದ್ಯಗಳನ್ನು ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಕ್ರಿಕೆಟ್ ಲೋಕದ ವರ್ಣರಂಜಿತ ಹಬ್ಬ ಎಂದೇ ಹೇಳಲಾಗುವ ಐಪಿಎಲ್ ಶುರುವಾಗುತ್ತಿರುವುದು ಅಭಿಮಾನಿಗಳಲ್ಲಿ ಸಂಭ್ರಮ ತಂದಿದೆ ಎನ್ನಲಾಗಿದೆ.

- Advertisement -

Latest News

error: Content is protected !!