Friday, June 26, 2026
Homeತಾಜಾ ಸುದ್ದಿಕೇಂದ್ರ ಸೇವೆಗೆ ಧರ್ಮಸ್ಥಳ ಪ್ರಕರಣದ ಎಸ್ಐಟಿ ಮುಖ್ಯಸ್ಥ ಪ್ರಣವ್ ಮೊಹಂತಿ

ಕೇಂದ್ರ ಸೇವೆಗೆ ಧರ್ಮಸ್ಥಳ ಪ್ರಕರಣದ ಎಸ್ಐಟಿ ಮುಖ್ಯಸ್ಥ ಪ್ರಣವ್ ಮೊಹಂತಿ

- Advertisement -
- Advertisement -

ಬೆಂಗಳೂರು: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಎಸ್ಐಟಿ ಮುಖ್ಯಸ್ಥ ಪ್ರಣವ್ ಮೊಹಂತಿ ಅವರನ್ನು ಕೇಂದ್ರ ಸೇವೆಗೆ ಆಯ್ಕೆ ಮಾಡಲಾಗಿದೆ.

ಕೇಂದ್ರ ಸರ್ಕಾರದ ನೇಮಕಾತಿ ಕುರಿತ ಸಂಪುಟ ಸಮಿತಿ ವಿವಿಧ ರಾಜ್ಯಗಳ ಒಟ್ಟು 35 ಐಪಿಎಸ್ ಅಧಿಕಾರಿಗಳನ್ನು ಕೇಂದ್ರ ಸೇವೆಗೆ ಆಯ್ಕೆ ಮಾಡಿದೆ.ಈ ಕುರಿತು ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ. ಜಿ. ಪರಮೇಶ್ವರ್, ಪ್ರಣವ್ ಮೊಹಂತಿ ಕೇಂದ್ರ ಸೇವೆಗೆ ಹೋದರೆ ಬೇರೆ ಅಧಿಕಾರಿಯನ್ನು ಎಸ್ಐಟಿಗೆ ನೇಮಕ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ಹೇಳಿದ್ದಾರೆ.

ಅಲ್ಲದೇ, ಕಾನೂನು ಪ್ರಕಾರ ಏನಿದೆಯೋ ಅದರಂತೆ ನಡೆದುಕೊಳ್ಳುವುದಾಗಿ ಹೇಳಿರುವ ಗೃಹ ಸಚಿವರು, ಕೇಂದ್ರ ಸೇವೆಗೆ ಹೋದರೂ ಎಸ್ಐಟಿಯಲ್ಲಿ ಮುಂದುವರಿಯಲು ಅವಕಾಶ ಇದೆಯಾ ಅಂತಲೂ ನೋಡುವುದಾಗಿ ತಿಳಿಸಿದ್ದಾರೆ.

- Advertisement -

Latest News

error: Content is protected !!