- Advertisement -
![]()
- Advertisement -
ಇರಾನ್‌ನ ನೂತನ ಸರ್ವೋಚ್ಚ ನಾಯಕ ಮೊಜ್ಜಾಬಾ ಖಮೇನಿ ಅವರು ಟೆಹ್ರಾನ್ ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡು ಕೋಮಾ ಸ್ಥಿತಿಯಲ್ಲಿದ್ದಾರೆ ಎಂದು ವರದಿಯಾಗಿದೆ.
56 ವರ್ಷದ ಧರ್ಮಗುರು ಖಮೇನಿ ಸದ್ಯಕ್ಕೆ ಕೋಮ್ ನಗರದಲ್ಲಿ ತೀವ್ರ ನಿಗಾ ಘಟಕದಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಇದೇ ಮೊದಲ ಬಾರಿಗೆ ಆಸ್ಪತ್ರೆಯ ಹೆಸರನ್ನು ಇರಾನ್ ಬಹಿರಂಗಗೊಳಿಸಿದೆ.
ಫೆ.28ರಂದು ಇಸ್ರೇಲ್ ಮತ್ತು ಅಮೆರಿಕ ವೈಮಾನಿಕ ಪಡೆ ಜಂಟಿಯಾಗಿ ನಡೆಸಿದ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಅಯತೊಲ್ಲಾ ಅಲಿ ಖಮೇನಿ ಹಾಗೂ ಕುಟುಂಬ ಸದಸ್ಯರು ಹತ್ಯೆಗೀಡಾಗಿದ್ದರು. ಈ ದಾಳಿಯಲ್ಲಿ ನೂತನವಾಗಿ ಆಯ್ಕೆಗೊಂಡಿದ್ದ ಮೊಜ್ಜಾಬಾ ಖಮೇನಿ ಕೂಡಾ ಗಂಭೀರವಾಗಿ ಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿರುವುದಾಗಿ ವರದಿಯಾಗಿತ್ತು. ಅದರೆ ಈವರೆಗೂ ಇರಾನ್ ಈ ಕುರಿತು ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ ಎಂದು ವರದಿಯಾಗಿದೆ.
- Advertisement -


