Tuesday, June 9, 2026
Homeಕರಾವಳಿಸುಳ್ಯ ಪೊಲೀಸ್ ಠಾಣಾ ಉಪ ನಿರೀಕ್ಷಕರಾಗಿ ಈರಯ್ಯ ದೂಂತೂರು ನೇಮಕ

ಸುಳ್ಯ ಪೊಲೀಸ್ ಠಾಣಾ ಉಪ ನಿರೀಕ್ಷಕರಾಗಿ ಈರಯ್ಯ ದೂಂತೂರು ನೇಮಕ

- Advertisement -
- Advertisement -

ಸುಳ್ಯ ಪೊಲೀಸ್ ಠಾಣಾ ಉಪ ನಿರೀಕ್ಷಕರಾಗಿ ಈರಯ್ಯ ದೂಂತೂರು ಅವರನ್ನು ನೇಮಕ‌ ಮಾಡಿ ಸರಕಾರ ಆದೇಶ ಮಾಡಿದೆ. ಕಳೆದ ಎರಡು ವರ್ಷಗಳಿಂದ ಸುಳ್ಯ ಎಸ್ಸೈ ಆಗಿದ್ದ ದಿಲೀಪ್ ಜಿ.ಆರ್. ಅವರಿಗೆ ವರ್ಗಾವಣೆಯಾಗಿದೆ.

2014ನೇ ಬ್ಯಾಚ್‌ನ ಅಧಿಕಾರಿಯಾಗಿರುವ ಈರಯ್ಯ ದೂಂತೂರು ಅವರು ಬಂಟ್ವಾಳ ಹಾಗೂ ವಿಟ್ಲದಲ್ಲಿ ಪ್ರೊಬೇಷನರಿ ಎಸ್ಸೈ ಆಗಿ ಬಳಿಕ ಬೆಳ್ಳಾರೆ ಠಾಣೆಯಲ್ಲಿ ಉಪ ನಿರೀಕ್ಷಕರಾಗಿದ್ದರು.

ಬಳಿಕ ಉಪ್ಪಿನಂಗಡಿ, ಶಿರಸಿಯಲ್ಲಿ ಕರ್ತವ್ಯ ನಿರ್ವಹಿಸಿ ಈಗ ಕುಂದಾಪುರದಲ್ಲಿ ಎಸ್ಸೈ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಬೆಳ್ಳಾರೆ ಠಾಣೆಯಲ್ಲಿ ಸುಮಾರು ಎರಡೂವರೆ ವರ್ಷ ಎಸ್ಸೈ ಆಗಿ ಕರ್ತವ್ಯ ನಿರ್ವಹಿಸಿದ್ದ ಈರಯ್ಯ ಕವಿ, ಸಾಹಿತಿಯಾಗಿಯೂ ಹೆಸರು ಗಳಿಸಿದ್ದಾರೆ. ಇವರು ಮೂಲತಃ ಬೆಂಗಳೂರಿನವರು.

- Advertisement -

Latest News

error: Content is protected !!