Sunday, June 7, 2026
Homeಅಪರಾಧಮೇ.31ಕ್ಕೆ ಬೆಂಗಳೂರಿಗೆ ಬರ್ತಾರಾ ಪ್ರಜ್ವಲ್ ರೇವಣ್ಣ; ಟಿಕೆಟ್ ಬುಕ್ ಮಾಡಿದ ಹಾಸನ ಸಂಸದ

ಮೇ.31ಕ್ಕೆ ಬೆಂಗಳೂರಿಗೆ ಬರ್ತಾರಾ ಪ್ರಜ್ವಲ್ ರೇವಣ್ಣ; ಟಿಕೆಟ್ ಬುಕ್ ಮಾಡಿದ ಹಾಸನ ಸಂಸದ

- Advertisement -
- Advertisement -

ಬೆಂಗಳೂರು : ಹಾಸನ ಪೆನ್ ಡ್ರೈವ್ ಪ್ರಕರಣದಲ್ಲಿ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಮೊನ್ನೆ ವೀಡಿಯೋ ಮೂಲಕ ಪ್ರತ್ಯಕ್ಷವಾಗಿ ಮೇ.31ರಂದು ಎಸ್ ಐಟಿ ಮುಂದೆ ವಿಚಾರಣೆಗೆ ಹಾಜರಾಗೋದಾಗಿ ಹೇಳಿದ್ದರು. ಅದರ ಬೆನ್ನಲ್ಲೇ ಮೇ.31 ರಂದು ಬೆಂಗಳೂರಿಗೆ ಬರಲು ಪ್ರಜ್ವಲ್ ರೇವಣ್ಣ ಟಿಕೆಟ್ ಬುಕ್ ಮಾಡಿದ್ದಾರೆ ಎನ್ನಲಾಗಿದೆ.

ಜರ್ಮನಿಗೆ ತೆರಳಲು ಲುಪ್ತಾನ್ಸಾ ಫ್ಲೈಟ್ ಟಿಕೆಟ್ ಬುಕ್ ಮಾಡಿರುವ ಪ್ರಜ್ವಲ್ ರೇವಣ್ಣ ಅವರು ಜರ್ಮನಿಯ ಫ್ರಾಂಕ್ ಫರ್ಟ್ ನಿಂದ ಬೆಂಗಳೂರಿಗೆ ರಿಟರ್ನ್ ಟಿಕೆಟ್ ಬುಕ್ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಮೇ.31 ರ ಮಧ್ಯಾಹ್ನ 1.30 ಕ್ಕೆ ಫ್ರಾಂಕ್ ಫರ್ಟ್ ನಿಂದ ವಿಮಾನವು ಹೊರಡಲಿದ್ದು, ರಾತ್ರಿ 1 ಗಂಟೆ ಸುಮಾರಿಗೆ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದೆ. ಈಗಾಗಲೇ ಎಸ್‌ ಐಟಿ ತಂಡ ವಿಮಾನ ನಿಲ್ದಾಣದಲ್ಲಿ ಬೀಡು ಬಿಟ್ಟಿದೆ. ಪ್ರಜ್ವಲ್‌ ವಿಮಾನ ನಿಲ್ದಾಣ ಬರುತ್ತಿದ್ದಂತೆ ವಶಕ್ಕೆ ಪಡೆಯಲಿದೆ.

- Advertisement -

Latest News

error: Content is protected !!