Wednesday, May 1, 2024
Homeತಾಜಾ ಸುದ್ದಿರಾಜ್ಯದಲ್ಲಿ ಹೊಸ ಜಿಲ್ಲೆಗಳ ಉದಯಕ್ಕೆ ನಾಂದಿಯಾಗುತ್ತಾ ನಾಳಿನ ಬಜೆಟ್?

ರಾಜ್ಯದಲ್ಲಿ ಹೊಸ ಜಿಲ್ಲೆಗಳ ಉದಯಕ್ಕೆ ನಾಂದಿಯಾಗುತ್ತಾ ನಾಳಿನ ಬಜೆಟ್?

spot_img
- Advertisement -
- Advertisement -

ಬೆಂಗಳೂರು: ಸಿಎಂ ಸಿದ್ದರಾಮಯ್ಯ ನಾಳೆ ರಾಜ್ಯ ಬಜೆಟ್ ಮಂಡಿಸಲಿದ್ದಾರೆ. ಈ ಬಜೆಟ್ ನಲ್ಲಿ ಎರಡು ಹೊಸ ಜಿಲ್ಲೆಗಳನ್ನು ಘೋಷಣೆ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ.  ಬೆಳಗಾವಿ ಹಾಗೂ ತುಮಕೂರು ಜಿಲ್ಲೆಯನ್ನು ವಿಭಜಿಸಿ ಹೊಸ ಜಿಲ್ಲೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಫೆಬ್ರವರಿ.8ರಂದು ರಾಜ್ಯ ಸರ್ಕಾರ ಹೊರಡಿಸಿರುವಂತ ಸುತ್ತೋಲೆಯಲ್ಲಿ  ಅಸ್ತಿತ್ವದಲ್ಲಿರುವ ಜಿಲ್ಲೆಗಳ ಮಿತಿ ಪುನರ್ ರಚಿಸುವ ಬಗ್ಗೆ ಉಲ್ಲೇಖಿಸಲಾಗಿದೆ.ಅದರಲ್ಲಿ ಬೆಳಗಾವಿ ಹಾಗೂ ತುಮಕೂರು ಜಿಲ್ಲೆಯ ಹೆಸರು ಉಲ್ಲೇಖ ಮಾಡಲಾಗಿದೆ. ನಾಳೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಮಂಡಿಸುತ್ತಿರುವಂತ ಬಜೆಟ್ ನಲ್ಲಿ ಚಿಕ್ಕೋಡಿ, ಗೋಕಾಕ್ ಜಿಲ್ಲೆಗಳನ್ನು ಹೊಸ ಜಿಲ್ಲೆಯಾಗಿ ಘೋಷಣೆ ಮಾಡಲಿದ್ದಾರೆ ಎನ್ನಲಾಗುತ್ತಿದೆ.

ಅಂದಹಾಗೇ ರಾಜ್ಯದಲ್ಲಿ ದೊಡ್ಡ ಜಿಲ್ಲೆಗಳು ಎಂಬುದಾಗಿ ಬೆಳಗಾವಿ ಹಾಗೂ ತುಮಕೂರು ಕರೆಯಲಾಗುತ್ತಿದೆ. ಈ ಜಿಲ್ಲೆಗಳನ್ನು ವಿಭಜಿಸಿ ಹೊಸ ಜಿಲ್ಲೆಗಳನ್ನು ಘೋಷಣೆ ಮಾಡಲು ನಿರ್ಧರಿಸಲಾಗಿದೆ ಎನ್ನಲಾಗುತ್ತಿದ್ದು ಎಲ್ಲಾ ಅನುಮಾನಗಳಿಗೆ, ಪ್ರಶ್ನೆಗಳಿಗೆ ನಾಳೆ ಉತ್ತರ ಸಿಗಲಿದೆ.

- Advertisement -
spot_img

Latest News

error: Content is protected !!