Wednesday, June 3, 2026
Homeಕರಾವಳಿಮಂಗಳೂರುಈಶ್ವರಮಂಗಲ; ಕುಣಿತ ಭಜನೆ  ಮಾಡುತ್ತಿದ್ದಾಗಲೇ ಕುಸಿದು ಬಿದ್ದು ಮಹಿಳೆ ಸಾವು

ಈಶ್ವರಮಂಗಲ; ಕುಣಿತ ಭಜನೆ  ಮಾಡುತ್ತಿದ್ದಾಗಲೇ ಕುಸಿದು ಬಿದ್ದು ಮಹಿಳೆ ಸಾವು

- Advertisement -
- Advertisement -

ಈಶ್ವರಮಂಗಲ; ಕುಣಿತ ಭಜನೆ  ಮಾಡುತ್ತಿದ್ದಾಗಲೇ ಕುಸಿದು ಬಿದ್ದು ಮಹಿಳೆ ಸಾವನ್ನಪ್ಪಿರುವ ಘಟನೆ ಕಾವು ಮುತ್ತು ಮಾರಿಯಮ್ಮ ದೇವಸ್ಥಾನದ ಜಾತ್ರೋತ್ಸವದಲ್ಲಿ ಫೆಬ್ರವರಿ 28ರ ರಾತ್ರಿ ನಡೆದಿದೆ. ಸುಳ್ಯಪದವು ಮಹಾಲಕ್ಷ್ಮಿ ವನಿತಾ ಭಜನ ಮಂಡಳಿಯ ಸದಸ್ಯೆ ರತ್ನಾವತಿ ಬಾಳಪ್ಪ ಪೂಜಾರಿ ಕನ್ನಡ್ಕ (63) ಮೃತರು.

ಮುತ್ತು ಮಾರಿಯಮ್ಮ ದೇವಸ್ಥಾನದ ಜಾತ್ರೋತ್ಸವದಲ್ಲಿ ಸುಳ್ಯಪದವು ಮಹಾಲಕ್ಷ್ಮಿ ವನಿತಾ ಭಜನ ಮಂಡಳಿಯ ಕುಣಿತ ಭಜನೆ ಕಾರ್ಯಕ್ರಮದಲ್ಲಿ ರತ್ನಾವತಿ ಬಾಳಪ್ಪ ಪೂಜಾರಿ ಭಾಗವಹಿಸಿದ್ದರು. ಭಜನೆ ಕುಣಿತ ಮಾಡುತ್ತಿರುವ ವೇಳೆ ಅವರು ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆ ತೆಗೆದುಕೊಂಡು ಹೋಗಲಾಗಿದ್ದು, ಅಲ್ಲಿಗೆ ತಲುಪುವ ಮೊದಲೇ ಅವರು ಮೃತಪಟ್ಟಿದ್ದರು. ಸಾವಿಗೆ ಹೃದಯಾಘಾತ ಕಾರಣ ಎಂದು ವೈದ್ಯರು ತಿಳಿಸಿದ್ದಾರೆ.

ದೇವರಲ್ಲಿ ಅಪಾರ ಭಕ್ತಿ ಹೊಂದಿದ್ದ ಅವರಿಗೆ ಫೆಬ್ರವರಿ 27ರಂದು ಭಜನೆಗೆ ಬರಲು ಸಾಧ್ಯವಾಗಿರಲಿಲ್ಲ. ಫೆಬ್ರವರಿ 28ರಂದು ಎರಡು ಭಜನೆ ಮಾಡಿದ ಬಳಿಕ ಮೂರನೇ ಭಜನೆ ಸಂದರ್ಭದಲ್ಲಿ ಕುಸಿದು ಬಿದ್ದಿದ್ದಾರೆ. ಅವರು ವಿವಾಹಿತ ಪುತ್ರಿಯನ್ನು ಅಗಲಿದ್ದಾರೆ.

- Advertisement -

Latest News

error: Content is protected !!