Thursday, June 27, 2024
Homeಕರಾವಳಿಉಡುಪಿಇಸ್ಲಾಂ ಸಂಘಟನೆಗಳು ಮುಸ್ಲಿಂ ವಿದ್ಯಾರ್ಥಿನಿಯರಿಗೆ ಗುಪ್ತ ಸ್ಥಳದಲ್ಲಿ ತರಬೇತಿ ನೀಡುತ್ತಿದ್ದಾರೆ- ಉನ್ನತ ಮಟ್ಟದಲ್ಲಿ ತನಿಖೆಗೆ ಗೃಹ...

ಇಸ್ಲಾಂ ಸಂಘಟನೆಗಳು ಮುಸ್ಲಿಂ ವಿದ್ಯಾರ್ಥಿನಿಯರಿಗೆ ಗುಪ್ತ ಸ್ಥಳದಲ್ಲಿ ತರಬೇತಿ ನೀಡುತ್ತಿದ್ದಾರೆ- ಉನ್ನತ ಮಟ್ಟದಲ್ಲಿ ತನಿಖೆಗೆ ಗೃಹ ಸಚಿವರಿಗೆ ಒತ್ತಾಯ

spot_img
- Advertisement -
- Advertisement -

ಉಡುಪಿ: ಹಿಜಾಬ್-ಕೇಸರಿ ಶಾಲು ವಿವಾದದಿಂದ ಜಿಲ್ಲೆಯಲ್ಲಿ ಅಶಾಂತಿಯ ವಾತಾವರಣ ಸೃಷ್ಟಿ ಮಾಡವ ನಿಟ್ಟಿನಲ್ಲಿ, ಕೆಲ ಇಸ್ಲಾಂ ಸಂಘಟನೆಗಳು ಮುಸ್ಲಿಂ ವಿದ್ಯಾರ್ಥಿನಿಯರಿಗೆ ಗುಪ್ತ ಸ್ಥಳದಲ್ಲಿ ತರಬೇತಿ ನೀಡುತ್ತಿದ್ದಾರೆ, ಈ ಕುರಿತು ಉನ್ನತ ಮಟ್ಟದಲ್ಲಿ ತನಿಖೆ ನಡೆಸುವಂತೆ ಶಾಸಕ ರಘಪತಿ ಭಟ್ ಅವರು ಗೃಹ ಸಚಿವರಿಗೆ ಪತ್ರದ ಮೂಲಕ ಒತ್ತಾಯ ಮಾಡಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಹಿಜಾಬ್-ಕೇಸರಿ ಶಾಲು ವಿವಾದದಿಂದ ಭಾರತದಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡುತ್ತಿದೆ ಎಂದು ಅಂತರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗುವ ನಿಟ್ಟಿನಲ್ಲಿ, ಈ ವಿಚಾರವನ್ನು ದೊಡ್ಡ ಮಾಡುತ್ತಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಅಲ್ಲದೆ 12 ಮುಸ್ಲಿಂ ವಿದ್ಯಾರ್ಥಿನಿಯರನ್ನು ಮುಂದಿಟ್ಟುಕೊಂಡು ಜಿಲ್ಲೆಯಲ್ಲಿ ಕೋಮು ಗಲಭೆ ಮತ್ತು ಮತೀಯಾವಾದ ಸೃಷ್ಟಿಸಿ, ಅಶಾಂತಿ ಹಾಗೂ ಸಾಮಾಜಿಕ ಸ್ವಾಸ್ಥ್ಯವನ್ನು ಹಾಳು ಮಾಡುವ ನಿಟ್ಟಿನಲ್ಲಿ, ಇಸ್ಲಾಂ ಸಂಘಟನೆಗಳಾದ ಎಸ್‌.ಡಿ.ಪಿ.ಐ. ಮತ್ತು ಸಿ.ಎಫ್.ಐ. ಹುನ್ನಾರ ನಡೆಸುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಇಸ್ಲಾಂ ಸಂಘಟನೆಗಳ ಈ ಕೃತ್ಯವನ್ನು ಗಂಭೀರವಾಗಿ ಪರಿಗಣಿಸಿ, ಉನ್ನತ ಮಟ್ಟದಲ್ಲಿ ತನಿಖೆ ನಡೆಸುವಂತೆ ಶಾಸಕ ರಘಪತಿ ಭಟ್‌ ಅವರು ಗೃಹ ಸಚಿವ ಅರಗ ಜ್ಞಾನೇಂದ್ರ ಅವರಗೆ ಪತ್ರದ ಮೂಲಕ ಒತ್ತಾಯ ಮಾಡಿದ್ದಾರೆ.

- Advertisement -
spot_img

Latest News

error: Content is protected !!