Saturday, May 25, 2024
Homeತಾಜಾ ಸುದ್ದಿಮತ್ತೊಂದು ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದೆ ಇಸ್ರೋ; ಇಂದು ಸೂರ್ಯಯಾನ ಆದಿತ್ಯ ಎಲ್-1 ಉಡಾವಣೆ

ಮತ್ತೊಂದು ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದೆ ಇಸ್ರೋ; ಇಂದು ಸೂರ್ಯಯಾನ ಆದಿತ್ಯ ಎಲ್-1 ಉಡಾವಣೆ

spot_img
- Advertisement -
- Advertisement -

ತಮಿಳುನಾಡು; ಇಸ್ರೋ ಇಂದು ಮತ್ತೊಂದು ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದೆ. ಚಂದ್ರಯಾನ-3 ಸಕ್ಸಸ್ ಆದ ಬೆನ್ನಲ್ಲೇ ಸೂರ್ಯಯಾನಕ್ಕೆ ಇಸ್ರೋ ತಯಾರಾಗಿದೆ.

ಸೂರ್ಯನ ಅಧ್ಯಯನ ಮಾಡುವ ಉದ್ದೇಶದಿಂದ ಇಸ್ರೋ ಆದಿತ್ಯ ಎಲ್‌-1 ನೌಕೆಯನ್ನು ಇಂದು (ಸೆಪ್ಟೆಂಬರ್‌ 2) ರಂದು ಬೆಳಿಗ್ಗೆ 11.50ಕ್ಕೆ ಶ್ರೀಹರಿಕೋಟಾದ ಸತೀಶ್‌ ಧವನ್‌ ಉಡಾವಣಾ ಕೇಂದ್ರದಿಂದ ಉಡಾವಣೆ ಮಾಡಲಿದೆ. ಈ ಮೂಲಕ ಮತ್ತೊಂದು ಇತಿಹಾಸ ಸೃಷ್ಟಿಸಲು ಇಸ್ರೋ ಮುಂದಾಗಿದೆ.

ಇನ್ನು ಈ ಉಡಾವಣೆಯನ್ನು ಸಾರ್ವಜನಿಕರು ಕೂಡ ನೇರವಾಗಿ ವೀಕ್ಷಣೆ ಮಾಡಬಹುದು. ಇಂದು ಬೆಳಿಗ್ಗೆ 11.50ಕ್ಕೆ ಸತೀಶ್‌ ಧವನ್‌ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆಗೊಳ್ಳುವ ಆದಿತ್ಯ ಎಲ್‌ -1 ಅನ್ನು ಲಾಂಚ್ ವೀವ್‌ ಗ್ಯಾಲರಿಯಿಂದ್ ನೇರವಾಗಿ ವಿಕ್ಷಿಸಲು ಇಸ್ರೋ ಸಾರ್ವಜನಿಕರಿಗೆ ಅವಕಾಶ ನೀಡಿದೆ. ಇದಕ್ಕೆ ಇಸ್ರೋ ವೆಬ್ ಲಿಂಕ್ ಮೂಲಕ ನೋಂದಣಿ ಮಾಡಿಕೊಳ್ಳಬಹುದು.

- Advertisement -
spot_img

Latest News

error: Content is protected !!