Saturday, June 29, 2024
Homeಕರಾವಳಿ9/11ಎ ಪ್ರಮಾಣ ಪತ್ರವನ್ನು ಗ್ರಾಮ ಪಂಚಾಯತ್ ನಲ್ಲಿಯೇ ನೀಡಿ; ಜಿಲ್ಲಾ ಉಸ್ತುವಾರಿ ಸಚಿವರಿಗೆ ಕೆಪಿಸಿಸಿ ಪ್ರ.ಕಾ...

9/11ಎ ಪ್ರಮಾಣ ಪತ್ರವನ್ನು ಗ್ರಾಮ ಪಂಚಾಯತ್ ನಲ್ಲಿಯೇ ನೀಡಿ; ಜಿಲ್ಲಾ ಉಸ್ತುವಾರಿ ಸಚಿವರಿಗೆ ಕೆಪಿಸಿಸಿ ಪ್ರ.ಕಾ ರಕ್ಷಿತ್ ಶಿವರಾಂ ಅವರಿಂದ ಮನವಿ ಪತ್ರ

spot_img
- Advertisement -
- Advertisement -

ಬೆಳ್ತಂಗಡಿ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರಿಗೆ 9/11ಎ ಪ್ರಮಾಣ ಪತ್ರವನ್ನು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ನೀಡಿರುವ ಆದೇಶವನ್ನು ರದ್ದುಪಡಿಸಿ ಗ್ರಾಮ ಪಂಚಾಯತ್ ನಲ್ಲಿಯೇ ನೀಡುವಂತೆ ಮನವಿ ಸಲ್ಲಿಸಿದರು.

ರಕ್ಷಿತ್ ಶಿವರಾಂ ಅವರು ಸಲ್ಲಿಸಿರುವ ಮನವಿಯಲ್ಲಿ, ‘ಈ ಹಿಂದೆ 9/11 ಪ್ರಮಾಣ ಪತ್ರವು ಗ್ರಾಮ ಪಂಚಾಯತ್ ನಲ್ಲಿ ನೀಡುತ್ತಿದ್ದು ಪ್ರಸ್ತುತ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ನೀಡಿರುವುದರಿಂದ ಗ್ರಾಮೀಣ ಪ್ರದೇಶದ ಸಾರ್ವಜನಿಕರು 9 ಮತ್ತು 11 ಪಡೆಯಲು 80 ರಿಂದ 150 ಕಿಲೋಮೀಟರ್ ಪ್ರಯಾಣಿಸಬೇಕಾಗಿದೆ. ಗ್ರಾಮೀಣ ಪ್ರದೇಶದ 9 ಮತ್ತು 11 ಪಡೆಯಲು ಸ್ಥಳೀಯ ಗ್ರಾಮ ಪಂಚಾಯತ್ ಗಳಿಗೆ ಅಧಿಕಾರವನ್ನು ನೀಡಬೇಕೆಂದು,’ ಕೋರಿದ್ದರು.  

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಕೆ ಬಂಗೇರ ಕಾಶಿಪಟ್ಣ, ಶೇಖರ್ ಕುಕ್ಕೆಡಿ, ಪಕ್ಷದ ಪ್ರಮುಖ ಅಬ್ದುಲ್ ರಹಿಮಾನ್ ಪಡ್ಪು ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!