Wednesday, October 14, 2026
Homeತಾಜಾ ಸುದ್ದಿಸಿಎಂ  ವಿರುದ್ಧ ಪ್ರಾಸಿಕ್ಯೂಷನ್ ಗೆ ಗವರ್ನರ್ ಅನುಮತಿ ವಿಚಾರ; ಹೈಕೋರ್ಟ್ ಗೆ ಸಿದ್ದರಾಮಯ್ಯ ರಿಟ್ ಅರ್ಜಿ...

ಸಿಎಂ  ವಿರುದ್ಧ ಪ್ರಾಸಿಕ್ಯೂಷನ್ ಗೆ ಗವರ್ನರ್ ಅನುಮತಿ ವಿಚಾರ; ಹೈಕೋರ್ಟ್ ಗೆ ಸಿದ್ದರಾಮಯ್ಯ ರಿಟ್ ಅರ್ಜಿ ಸಲ್ಲಿಕೆ

- Advertisement -
- Advertisement -

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಸಿಎಂ  ವಿರುದ್ಧ ಪ್ರಾಸಿಕ್ಯೂಷನ್ ಗೆ ಗವರ್ನರ್ ಅನುಮತಿ ನೀಡಿದ್ದನ್ನು  ಪ್ರಶ್ನಿಸಿ  ಹೈಕೋರ್ಟ್ ಗೆ ಸಿದ್ದರಾಮಯ್ಯ ರಿಟ್ ಅರ್ಜಿ ಸಲ್ಲಿಸಿದ್ದಾರೆ.ರಾಜ್ಯಪಾಲರ ವಿಶೇಷ ಕಾರ್ಯದರ್ಶಿ, ಮೂವರು ದೂರುದಾರರನ್ನು ಪ್ರತಿವಾದಿಯನ್ನಾಗಿಸಿ ರಿಟ್ ಅರ್ಜಿ ಸಲ್ಲಿಸಿದ್ದಾರೆ.

ಸಚಿವ ಸಂಪುಟದ ಶಿಫಾರಸಿಗೆ ವಿರುದ್ಧವಾಗಿ ರಾಜ್ಯಪಾಲರು ನಡೆದುಕೊಂಡಿದ್ದಾರೆ. ಅನುಮತಿಗೂ ಮುನ್ನ ದಾಖಲೆಗಳನ್ನು ಪರಿಶೀಲಿಸಿಲ್ಲ ಎಂದು ರಿಟ್ ಅರ್ಜಿಯಲ್ಲಿ ತಿಳಿಸಲಾಗಿದೆ. ಸಿದ್ದರಾಮಯ್ಯ ಪರ ಹೈಕೋರ್ಟ್‌ ಗೆ ವಕೀಲರು ಅರ್ಜಿ ಸಲ್ಲಿಸಿದ್ದಾರೆ. ಸಿದ್ದರಾಮಯ್ಯ ಅವರ ಪರವಾಗಿ ಕಪಿಲ್‌ ಸಿಬಲ್, ಅಭಿಷೇಕ್‌ ಮನು ಸಿಂಘ್ವಿ ವಾದ ಮಂಡಿಸಲಿದ್ದಾರೆ.

ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ನೀಡಿರುವ ಅನುಮತಿ ರದ್ದುಪಡಿಸುವ ಕುರಿತು ಇಂದೇ ತುರ್ತು ವಿಚಾರಣೆ ನಡೆಸುವಂತೆ ಹೈಕೋರ್ಟ್ ಸಿಎಂ ಸಿದ್ದರಾಮಯ್ಯ ಪರ ವಕೀಲರು ಮನವಿ ಮಾಡಿದ್ದಾರೆ ಎನ್ನಲಾಗಿದೆ.

- Advertisement -

Latest News

error: Content is protected !!